ನಾಗನೂರು ಶ್ರೀ ರುದ್ರಾಕ್ಷಿ ಮಠ, ಬೆಳಗಾವಿಯ ಶ್ರೀ ಕುಮಾರೇಶ್ವರ ಉಚಿತ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಪ್ರಸಾದ ನಿಲಯದಲ್ಲಿ ಗುರುವಂದನಾ ಕಾರ್ಯಕ್ರಮ
ಬೆಳಗಾವಿ: ಶಿವ ಬಸವನಗರದ ಶ್ರೀ ಕುಮಾರೇಶ್ವರ ಉಚಿತ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಪ್ರಸಾದ ನಿಲಯದಲ್ಲಿ ಇಂದು ಅತ್ಯಂತ ಭಕ್ತಿಭಾವದಿಂದ ಗುರುವಂದನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಪರಮಪೂಜ್ಯ ಶ್ರೀ ಡಾ. ಅಲ್ಲಮಪ್ರಭು ಮಹಾಸ್ವಾಮೀಜಿಯವರು, ರುದ್ರಾಕ್ಷಿ ಮಠ, ನಾಗನೂರು (ಬೆಳಗಾವಿ) ವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಎಸ್. ಪಿ. ಹಿರೇಮಠ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಶ್ರೀ ಪ್ರಭು ಶಿವನಾಯ್ಕರ, ಪ್ರಾಚಾರ್ಯರು, ಸಿದ್ದರಾಮೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜು, ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ಡಾ. ಅಲ್ಲಮಪ್ರಭು ಮಹಾಸ್ವಾಮೀಜಿಯವರು ಉದ್ಘಾಟಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಶ್ರೀ ಮಠದ ಉಚಿತ ವಿದ್ಯಾರ್ಥಿ ಪ್ರಸಾದ ನಿಲಯಕ್ಕೆ ಗುರುಗಳಾದ ಶ್ರೀ ಶಿವಬಸವ ಮಹಾಸ್ವಾಮೀಜಿಯವರ ಕೊಡುಗೆ ಅಪಾರವಾದದು ಎಂದು ನೆನೆದು, ಗುರುಗಳ ಗೌರವ, ಶಿಸ್ತು, ಸಂಸ್ಕಾರ ಹಾಗೂ ಶಿಕ್ಷಣದ ಮಹತ್ವದ ಕುರಿತು ಅಮೂಲ್ಯ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮವನ್ನು ಪ್ರಸಾದ ನಿಲಯದ ವಿದ್ಯಾರ್ಥಿಗಳಾದ ಕಾರ್ತಿಕ ಗೌಡರ್ ಹಾಗೂ ಶ್ರೇಯಾ ವಾರಿ ನಿರೂಪಿಸಿದರು. ಮಂಜುನಾಥ್ ಗಾಣಿಗೇರ ಸ್ವಾಗತಿಸಿದರು. ಶ್ರಾವಣಿ ನಾಯಕ ಪ್ರಸ್ತಾವಿಕ ನುಡಿಗಳನ್ನಾಡಿದರು. ಕೊನೆಯಲ್ಲಿ ಸಾಕ್ಷಿ ಸುಳಷಿ ವಂದನಾರ್ಪಣೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಪ್ರಸಾದ ನಿಲಯದ ವ್ಯವಸ್ಥಾಪಕರು, ನಿಲಯ ಪಾಲಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
PublicNext
01/08/2026 06:04 pm
LOADING...