ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

35 ವರ್ಷಗಳಿಂದ ಲೆಕ್ಕ ಬಾಕಿ: ಕೂಡಲಸಂಗಮ ಮಂಡಳಿಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಡಿಸಿಎಂ!

ಬೆಂಗಳೂರು: ಇಂದು ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿಗಳು ಕಂದಾಯ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಿವಿಧ ಅಭಿವೃದ್ಧಿ ಪ್ರಾಧಿಕಾರಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು.

ಈ ವೇಳೆ, ಕಳೆದ 35 ವರ್ಷಗಳಿಂದ ಲೆಕ್ಕ ಪರಿಶೋಧನೆ (Audit) ಮಾಡಿಸದಿರುವುದಕ್ಕೆ ಕೂಡಲಸಂಗಮ ಮಂಡಳಿಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಬಳಿಕ, ಕಾಮಗಾರಿಗಳಿಗೆ ಸಂಬಂಧಿಸಿದಂತೆ ಯೋಜನೆಯ ಪ್ಲಾನ್ ಸಿದ್ಧಪಡಿಸಿದ ನಂತರ ಮೂಲ ಅಂದಾಜು ವೆಚ್ಚವನ್ನು ಪರಿಷ್ಕರಣೆ ಮಾಡಿ, ಸರಿಯಾದ ಕಾರಣ (Justification) ನೀಡಿ ಮಂಡಳಿಯು ಅನುಮೋದನೆ ನೀಡಬೇಕು. ಆ ಬಳಿಕ ಮುಂದಿನ ತೀರ್ಮಾನವನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

ಚಿಕ್ಕಸಂಗಮದಲ್ಲಿ ಕಲ್ಯಾಣ ಮಂಟಪ, ವೇದ ಪಾಠಶಾಲೆ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ ₹24.98 ಕೋಟಿ ಅನುದಾನ ಕೇಳಲಾಗಿದೆ. ಈ ಬಗ್ಗೆಯೂ ಶೀಘ್ರ ಕ್ರಮ ವಹಿಸಲಾಗುವುದು ಎಂದರು.

ಬಸವಕಲ್ಯಾಣ ಅಭಿವೃದ್ಧಿ ಮಂಡಳಿ 2005ರಲ್ಲಿ ಜಾರಿಗೆ ಬಂದಿದೆ. 2023ರವರೆಗೆ ಯಾವುದೇ ಗಮನಾರ್ಹ ಅಭಿವೃದ್ಧಿ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ಪ್ರಸ್ತುತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹744 ಕೋಟಿ ಹಣವನ್ನು ಮಂಜೂರು ಮಾಡಿ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರಲ್ಲಿ ಈಗಾಗಲೇ ₹480 ಕೋಟಿ ಖರ್ಚು ಮಾಡಲಾಗಿದೆ. ಉಳಿದ 17 ಸ್ಮಾರಕಗಳ ಕಾಮಗಾರಿಯನ್ನು ಶೀಘ್ರದಲ್ಲಿ ಮುಗಿಸಬೇಕು ಎಂದು ಸೂಚಿಸಿದರು.

ಮುಂದುವರಿದು, ಬಸವಕಲ್ಯಾಣಕ್ಕೆ ಮುಖ್ಯಮಂತ್ರಿಯವರೊಂದಿಗೆ ಭೇಟಿ ನೀಡಿದ್ದಾಗ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವುದಾಗಿ ತಿಳಿಸಲಾಗಿತ್ತು. ಈಗ ಮತ್ತೆ ಹೆಚ್ಚಿನ ಕಾಲಾವಕಾಶ ಕೇಳುತ್ತಿರುವುದು ಸರಿಯಲ್ಲ. ಎಲ್ಲ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಲೋಕಾರ್ಪಣೆಗೊಳಿಸಲು ಸಿದ್ಧಪಡಿಸಬೇಕು ಎಂದು ಬೀದರ್ ಜಿಲ್ಲಾಧಿಕಾರಿಗಳಿಗೆ ಡಿಸಿಎಂ ಸ್ಪಷ್ಟ ನಿರ್ದೇಶನ ನೀಡಿದರು.

ದೊಡ್ಡ ಮೊತ್ತದ ಕಾಮಗಾರಿಗಳನ್ನು ಕೈಗೊಂಡಿರುವುದರಿಂದ ಪ್ರತಿಯೊಂದು ಹಂತದಲ್ಲೂ ಪರಿಶೀಲನೆ ನಡೆಸಬೇಕು. ಈವರೆಗೆ ಪರಿಶೀಲಿಸಿರುವ ವೆಚ್ಚಗಳ ಕುರಿತ ಮಾಹಿತಿಯನ್ನು ಲೆಕ್ಕ ಪರಿಶೋಧನೆ ಮಾಡಿಸಬೇಕು. ಕೆಲವು ಕಾಮಗಾರಿಗಳ ಫಿನಿಶಿಂಗ್ ಸರಿಯಾಗಿ ಆಗುತ್ತಿಲ್ಲ, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಗುತ್ತಿಗೆದಾರರಿಗೆ ಅಗತ್ಯ ಸೂಚನೆ ನೀಡಬೇಕು ಎಂದು ತಿಳಿಸಿದರು.

Kudalasangama Development Authority audit, Kudalasangama board pending accounts, Basavakalyana Development Board budget, Karnataka DCM review meeting Vidhana Soudha, Basavakalyana 744 crore development project, Chikkasangama Veda Pathashala grant, Bidar Deputy Commissioner Basavakalyana instructions, Karnataka authority funds audit news, Vidhana Soudha development review 2026, Karnataka news updates

Edited By :
PublicNext

PublicNext

01/08/2026 06:05 pm

Cinque Terre

6.4 K

Cinque Terre

0

ಸಂಬಂಧಿತ ಸುದ್ದಿ