ಬೆಳಗಾವಿ: ಕಾಹೆರನ ಕುಲಪತಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ ಅವರ ಜನ್ಮ ದಿನಾಚರಣೆ ಅಂಗವಾಗಿ ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ‘ALIMCO’ (ಭಾರತೀಯ ಕೃತಕ ಅಂಗಗಳ ಉತ್ಪಾದನಾ ನಿಗಮ), ಕಾಹೆರನ ಕೆಎಲ್‌ಇ ಚಾರಿಟೇಬಲ್ ಆಸ್ಪತ್ರೆ ಇವುಗಳ ಸಂಯುಕ್ತಾಶ್ರಯದಲ್ಲಿ ಹಿರಿಯ ನಾಗರಿಕರಿಗೆ ಗಾಲಿಯುಕ್ತ ಕುರ್ಚಿ, ಶ್ರವಣ ಸಾಧನ ಹಾಗೂ ಜೀವನಾಧಾರಕ್ಕೆ ಅವಶ್ಯವಿರುವ ಸಾಮಗ್ರಿಗಳನ್ನು ವಿತರಿಸಲಾಯಿತು.
ನಂತರ ಮಾತನಾಡಿದ ಜೆಎನ್ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ರಾಜೇಶ ಪವಾರ ಅವರು, ಈ ಭಾಗದಲ್ಲಿ ಅಂಗವಿಕಲತೆಯಿಂದ ಬಳಲುತ್ತಿರುವವರನ್ನು ಗುರುತಿಸಿ ಅವರಿಗೆ ಅವಶ್ಯವಿರುವ ಕಾಳಜಿ ವಹಿಸುವುದರೊಂದಿಗೆ ಅವರ ಅಗತ್ಯಗಳನ್ನು ಪೂರೈಸಲು ಸದಾ ಒಂದು ಹೆಜ್ಜೆ ಮುಂದಿರುತ್ತದೆ. ಆದ್ದರಿಂದ ಯಾರೇ ಕೂಡ ಅಂಗವಿಕಲತೆಯಿಂದ ಬಳಲುತ್ತಿದ್ದರೆ ನಮ್ಮ ಗಮನಕ್ಕೆ ತೆಗೆದುಕೊಂಡು ಬರಬೇಕೆಂದು ಕೋರಿದರು.
ಈ ಸಂದರ್ಭದಲ್ಲಿ ಕಾಹೆರನ ಹೊಸ ಯೋಜನೆಗಳ ನಿರ್ದೇಶಕರಾದ ಡಾ. ವಿ. ಡಿ. ಪಾಟೀಲ, ಚಾರಿಟೇಬಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಆರೀಫ್ ಮಾಲ್ದಾರ, ಡಾ. ಆರ್. ಎಸ್. ಮುಧೋಳ, ಡಾ. ಅಂಜಲಿ ಮೆಟಗುಡಮಠ, ಅಲಿಮಕೋ ಮೇಲ್ವಿಚಾರಕರಾದ ಸನಾತನ, ಡಾ. ರವಿ ಜತ್ತಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಆಸ್ಪತ್ರೆಯ ರೋಗಿಗಳಿಗೆ ಹಣ್ಣು ವಿತರಿಸಲಾಯಿತು. ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ರಾಜಶೇಖರ ಸೋಮನಟ್ಟಿ, ಗುಲ್ನಾಜ್, ವಿನೋದ ದೇಶನೂರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
PublicNext
01/08/2026 07:08 pm
LOADING...