ಶಿರಸಿ: ಇಲ್ಲಿನ ಮೈನಾರಿಟಿ ಎಜ್ಯುಕೇಶನ್ ಮತ್ತು ವೆಲ್ಫೇರ್ ಟ್ರಸ್ಟ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ (ಉಪನಿರ್ದೇಶಕರ ಕಾರ್ಯಾಲಯ) ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ 2025-26ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮಾನ್ಯ ಶಾಸಕರಾದ ಶ್ರೀ ಭೀಮಣ್ಣ ಟಿ. ನಾಯ್ಕ್ ಅವರು ಇಂದು ದೀಪ ಬೆಳಗಿಸುವ ಮೂಲಕ ಅಧಿಕೃತವಾಗಿ ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, "ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಸತತ ಪರಿಶ್ರಮ ಮತ್ತು ಶಿಸ್ತಿನಿಂದ ಮಾತ್ರ ಶಿಕ್ಷಣ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ. ಗ್ರಾಮೀಣ ಹಾಗೂ ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗುವಂತಾಗಲು ಸರ್ಕಾರ ಹಾಗೂ ಸಂಘ-ಸಂಸ್ಥೆಗಳು ಶ್ರಮಿಸುತ್ತಿವೆ. ವಿದ್ಯಾರ್ಥಿಗಳು ಈ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡು ನಾಡಿಗೆ ಉತ್ತಮ ಹೆಸರನ್ನು ತರಬೇಕು" ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿವಿಧ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶಾಸಕರು ಸನ್ಮಾನಿಸಿ, ಶುಭ ಹಾರೈಸಿದರು.
ಸಮಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮೈನಾರಿಟಿ ಎಜ್ಯುಕೇಶನ್ ಮತ್ತು ವೆಲ್ಫೇರ್ ಟ್ರಸ್ಟ್‌ನ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
Kshetra Samachara
01/08/2026 07:12 pm
LOADING...