ಕೊಪ್ಪ: ಜಿಲ್ಲೆಯಲ್ಲಿ ಮುಂದುವರಿದಿರುವ ಭಾರಿ ಮಳೆಯ ಆರ್ಭಟಕ್ಕೆ ಪ್ರಕೃತಿ ವಿಕೋಪ ಹಾಗೂ ಸಾಲು ಸಾಲು ಅವಘಡಗಳು ಸಂಭವಿಸುತ್ತಿವೆ. ಇದರ ನಡುವೆ, ಕೊಪ್ಪ ತಾಲೂಕಿನ ಬಲಗಾರ್ ಬಳಿ ಭಾರೀ ಮಳೆಯಿಂದಾಗಿ ರಸ್ತೆ ಸರಿಯಾಗಿ ಕಾಣಿಸದೆ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ವಾಲಿದ ಘಟನೆ ನಡೆದಿದೆ. ಶಿವಮೊಗ್ಗದಿಂದ ಶೃಂಗೇರಿಗೆ ತೆರಳುತ್ತಿದ್ದ ಈ ಖಾಸಗಿ ಬಸ್, ಕೊಪ್ಪ - ಎನ್.ಆರ್. ಪುರ ಮಾರ್ಗದ ಬಲಗಾರ್ ಸಮೀಪ ಸಂಚರಿಸುತ್ತಿದ್ದಾಗ ಮಳೆಗೆ ಚಾಲಕನಿಗೆ ರಸ್ತೆ ಸ್ಪಷ್ಟವಾಗಿ ಗೋಚರಿಸದ ಪರಿಣಾಮವಾಗಿ ಬಸ್ ರಸ್ತೆ ಪಕ್ಕಕ್ಕೆ ವಾಲಿ, ಅಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿದೆ.
ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿದ್ದರಿಂದ ಭಾರಿ ಅನಾಹುತವೊಂದು ಅದೃಷ್ಟವಶಾತ್ ತಪ್ಪಿದ್ದು, ಪ್ರಯಾಣಿಕರೆಲ್ಲರೂ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ.
PublicNext
01/08/2026 07:19 pm
LOADING...