ಶಿರಸಿ:ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ. ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಶಾರೀರಿಕ ದೃಢತೆಯ ಜೊತೆಗೆ ಮಾನಸಿಕ ಉಲ್ಲಾಸ ಹಾಗೂ ಶಿಸ್ತು ಲಭಿಸುತ್ತದೆ ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅವರು ಹೇಳಿದರು.
ಅವರು ಶನಿವಾರ ಶಿರಸಿ ತಾಲೂಕಿನ ನಿಲೇಕಣಿಯ ಶ್ರೀ ವೆಂಕಟರಾವ್ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಏರ್ಪಡಿಸಲಾಗಿದ್ದ ಶಿರಸಿ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
“ಕ್ರೀಡೆಯಲ್ಲಿ ಭಾಗವಹಿಸುವಿಕೆ ಅತ್ಯಂತ ಮುಖ್ಯ. ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ, ಕ್ರೀಡಾ ಸ್ಪೂರ್ತಿಯಿಂದ ಮುನ್ನಡೆಯಬೇಕು. ಗ್ರಾಮೀಣ ಮತ್ತು ನಗರ ಪ್ರದೇಶದ ಉದಯೋನ್ಮುಖ ಕ್ರೀಡಾಪಟುಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಇಂತಹ ತಾಲೂಕು ಮಟ್ಟದ ಕ್ರೀಡಾಕೂಟಗಳು ಉತ್ತಮ ವೇದಿಕೆಯಾಗಿವೆ. ವಿದ್ಯಾರ್ಥಿಗಳು ಬರಿ ಪಠ್ಯಕ್ಕೆ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಾಗ ಮಾತ್ರ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಶಾಸಕರು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸಂತೋಷ್ ಶೆಟ್ಟಿ ಹಾಗೂ ಸದಸ್ಯರು, ಪ್ರಾಂಶುಪಾಲರು, ಸೇರಿದಂತೆ ಅನೇಕ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Kshetra Samachara
01/08/2026 07:24 pm
LOADING...