ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಳೆ ಪೊಲೀಸ್ ಕಾನ್ಸ್ ಸ್ಟೇಬಲ್ ಪರೀಕ್ಷೆ, ಕೆಇಎ ಕಮಾಂಡ್ ಸೆಂಟರ್ ನಿಂದ ನಿಗಾ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯನ್ನು ಭಾನುವಾರ (ಆ.2) ನಡೆಸುತ್ತಿದ್ದು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಪರೀಕ್ಷಾ ಕೇಂದ್ರಗಳ ಮೇಲೆ ಹದ್ದಿನ ಕಣ್ಣಿಡಲು ಬೆಂಗಳೂರಿನ ಕೆಇಎ ಕಚೇರಿಯಲ್ಲಿ ಕಮಾಂಡ್ ಸೆಂಟರ್ ಸ್ಥಾಪಿಸಿದ್ದು, ಅದರ ಕೊನೆ ಕ್ಷಣದ ತಯಾರಿಯನ್ನು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ಶನಿವಾರ ರಾತ್ರಿ ಪರಿಶೀಲಿಸಿದರು.

ರಾಜ್ಯದಲ್ಲಿ 884 ಕೇಂದ್ರಗಳಲ್ಲಿ 4,54,532 ಮಂದಿ ಪರೀಕ್ಷೆ ಬರೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಅಂದರೆ 149 ಪರೀಕ್ಷಾ ಕೇಂದ್ರಗಳು ಇದ್ದು ವೆಬ್‌ ಕಾಸ್ಟಿಂಗ್ ಮೂಲಕ ನಿಗಾ ಇಡಲು ಇಲ್ಲಿ ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ ಕಲ್ಬುರ್ಗಿ, ಯಾದಗಿರಿ, ರಾಯಚೂರು, ಬೀದರ್, ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳ ಮೇಲೂ ಇಲ್ಲಿನ ಕಮಾಂಡ್ ಸೆಂಟರ್ ಮೂಲಕವೇ‌ ನಿಗಾ ಇಡಲಾಗುತ್ತಿದೆ ಎಂದು ಪ್ರಸನ್ನ ಅವರು ತಿಳಿಸಿದರು.

ಉಳಿದ‌ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳ ಮೇಲೆ ಆಯಾ ಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ನಿಗಾ ಇಡಲು ಕಮಾಂಡ್ ಸೆಂಟರ್ ಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ವಿವರಿಸಿದರು.

ಆ.2ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12ರವರೆಗೆ ರಾಜ್ಯದ ಎಲ್ಲರಿಗೂ ಹಾಗೂ ಸಂಜೆ 4ರಿಂದ 5.30ರವರೆಗೆ ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

ಪರೀಕ್ಷಾ ಅಕ್ರಮಗಳಿಗೆ ಬ್ರೇಕ್ ಹಾಕುವ ಉದ್ದೇಶದಿಂದ ಈ ಬಾರಿಯೂ ತಂತ್ರಜ್ಞಾನವನ್ನು ಗರಿಷ್ಠ ಮಟ್ಟದಲ್ಲಿ ಬಳಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Edited By : PublicNext Desk
PublicNext

PublicNext

01/08/2026 07:56 pm

Cinque Terre

6.81 K

Cinque Terre

0

ಸಂಬಂಧಿತ ಸುದ್ದಿ