ಬೆಳಗಾವಿ: 12ನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣನವರ ಜೊತೆಗೆ ಹೆಗಲಿಗೆ ಹೆಗಲು ಕೊಟ್ಟು, ಕಾಯಕ ಹಾಗೂ ವಚನ ಸಾಹಿತ್ಯದ ಮೂಲಕ ಸಮಾಜದ ಏಳಿಗೆಗೆ ಶ್ರಮಿಸಿದ ಶಿವಶರಣ ಹಡಪದ ಅಪ್ಪಣ್ಣನವರ ಆದರ್ಶಗಳು ಪ್ರತಿಯೊಬ್ಬರಿಗೂ ದಾರಿದೀಪ ಎಂದು ಬೆಳಗಾವಿ ಮಹಾನಗರ ಪಾಲಿಕೆಯ ಉಪ ಮಹಾಪೌರರಾದ ಹನುಮಂತ ಕೊಂಗಾಲಿ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಳಗಾವಿ ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಶನಿವಾರ (ಆ. 1) ಜರುಗಿದ ಶ್ರೀ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಮೇಲು-ಕೀಳು ಎಂಬ ಭಾವನೆ ಅಳಿದು ಸಮಾನತೆ ಮೂಡಬೇಕೆಂದು ಹಡಪದ ಅಪ್ಪಣ್ಣನವರು ಶ್ರಮಿಸಿದ್ದರು. ಪ್ರತಿಯೊಬ್ಬರೂ ಅವರ ತತ್ವ-ಸಿದ್ಧಾಂತಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮಹಾಪೌರರಾದ ಪ್ರೀತಿ ಕಾಮಕರ, ಮಹಾನಗರ ಪಾಲಿಕೆ ಉಪ ಆಯುಕ್ತ ಉದಯಕುಮಾರ್ ತಳವಾರ, ಮಹಾನಗರ ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಲಕ್ಷ್ಮಿ ರಾಥೋಡ್. ಅಖಿಲ ಕರ್ನಾಟಕ ಹಡಪದ ಸಮಾಜ ಸೇವಾ ಸಂಘದ ರಾಜ್ಯ ಅಧ್ಯಕ್ಷರಾದ ಡಾಕ್ಟರ್ ದೇವು ಹಡಪದ, ರಾಜ್ಯ ಉಪಾಧ್ಯಕ್ಷ ಸುರೇಶ್ ಹಡಪದ, ಜಿಲ್ಲಾಧ್ಯಕ್ಷ ಶಿವಾನಂದ ಹುನ್ನೂರು, ತಾಲೂಕ ಅಧ್ಯಕ್ಷ ಮಹಾಂತೇಶ್ ಹಂಪಣ್ಣವರ ಸೇರಿದಂತೆ ಸುರೇಶ್ ಹಡಪದ, ಸಂಗಪ್ಪ ಹಡಪದ, ರಾಜು ನಾವಿ, ಸಂತೋಷ್ ನಾವಿ, ನಾಗಪ್ಪ ಹಡಪದ, ನೌಕರರ ಸಂಘದ ಅಧ್ಯಕ್ಷ ಧನಂಜಯ ಹೊಂಗಲ್ ಉಪಸ್ಥಿತರಿದ್ದರು.
ಭವ್ಯ ಮೆರವಣಿಗೆ:
ಕಾರ್ಯಕ್ರಮಕ್ಕೂ ಮುನ್ನ ನಗರದ ಅಶೋಕ ವೃತ್ತದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಅವರ ಭಾವ ಚಿತ್ರಕ್ಕೆ ಸಂಸದರಾದ ಜಗದೀಶ ಶೆಟ್ಟರ ಅವರು ಪುಷ್ಪ ನಮನ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಅಶೋಕ ವೃತ್ತದಿಂದ ಪ್ರಾರಂಭವಾದ ಭವ್ಯ ಮೆರವಣಿಗೆಯು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಕುಮಾರ ಗಂಧರ್ವ ಕಲಾ ಮಂದಿರಕ್ಕೆ ಆಗಮಿಸಿ ಸಮಾರೋಪಗೊಂಡಿತು. ಈ ವೇಳೆ ಸಂಸದ ಜಗದೀಶ್ ಶೇಟ್ಟರ್, ಬಿಜೆಪಿ ಮುಖಂಡೆ ಡಾ. ಸೋನಾಲಿ ಸರ್ನೋಬತ್ ಉಪಸ್ಥಿತರಿದ್ದರು
Kshetra Samachara
01/08/2026 08:28 pm
LOADING...