ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಟ್ಕಳ: ಮಾಡಿಫೈಡ್ ಸೈಲೆನ್ಸರ್ ವಿರುದ್ಧ ಪೊಲೀಸ್ ಪರಿಶೀಲನೆ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ

ಭಟ್ಕಳ: ವಾಹನಗಳಲ್ಲಿ ಅಕ್ರಮವಾಗಿ ಮಾಡಿಫೈಡ್ (ಡಿಫೆಕ್ಟಿವ್) ಸೈಲೆನ್ಸರ್ ಅಳವಡಿಕೆ ಹಾಗೂ ಅನಧಿಕೃತ ಮಾರ್ಪಾಡುಗಳನ್ನು ತಡೆಗಟ್ಟುವ ಉದ್ದೇಶದಿಂದ ಭಟ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಎಲ್ಲಾ ದ್ವಿಚಕ್ರ ವಾಹನ ಶೋರೂಂಗಳು, ಸರ್ವೀಸ್ ಸೆಂಟರ್‌ಗಳು ಮತ್ತು ಗ್ಯಾರೇಜ್‌ಗಳಲ್ಲಿ ಪಿಎಸ್‌ಐ ನವೀನ ನಾಯ್ಕ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಯಿತು.

ಪರಿಶೀಲನೆ ವೇಳೆ ಶೋರೂಂ ಹಾಗೂ ಗ್ಯಾರೇಜ್ ಮಾಲೀಕರು ಮತ್ತು ಸಿಬ್ಬಂದಿಗೆ ವಾಹನಗಳ ಸೈಲೆನ್ಸರ್‌ಗಳನ್ನು ಅಕ್ರಮವಾಗಿ ಬದಲಾಯಿಸುವುದು, ಅತಿಯಾದ ಶಬ್ದ ಉಂಟುಮಾಡುವ ಮಾಡಿಫೈಡ್ ಸೈಲೆನ್ಸರ್‌ಗಳನ್ನು ಅಳವಡಿಸುವುದು ಹಾಗೂ ವಾಹನಗಳಲ್ಲಿ ಅನಧಿಕೃತ ಬದಲಾವಣೆಗಳನ್ನು ಮಾಡುವುದು ಮೋಟಾರು ವಾಹನ ಕಾಯ್ದೆಯ ಉಲ್ಲಂಘನೆಯಾಗಿದ್ದು, ಇಂತಹ ಯಾವುದೇ ಕೆಲಸಗಳನ್ನು ಕೈಗೊಳ್ಳಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.

ನಿಯಮ ಉಲ್ಲಂಘಿಸಿ ಇಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡುಬಂದರೆ ಸಂಬಂಧಪಟ್ಟ ಶೋರೂಂ, ಗ್ಯಾರೇಜ್ ಮಾಲೀಕರು ಹಾಗೂ ಸಿಬ್ಬಂದಿಯ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದರು.

ಈ ಕುರಿತು ಭಟ್ಕಳ ನಗರ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪಿಎಸ್‌ಐ ನವೀನ ನಾಯ್ಕ ಮಾತನಾಡಿ, ಸಾರ್ವಜನಿಕರ ಸುರಕ್ಷತೆ, ರಸ್ತೆ ಶಿಸ್ತು ಹಾಗೂ ಶಬ್ದ ಮಾಲಿನ್ಯ ನಿಯಂತ್ರಣದ ದೃಷ್ಟಿಯಿಂದ ಇಂತಹ ಪರಿಶೀಲನಾ ಕಾರ್ಯಾಚರಣೆಗಳು ಮುಂದಿನ ದಿನಗಳಲ್ಲಿಯೂ ನಿರಂತರವಾಗಿ ಮುಂದುವರಿಯಲಿವೆ ಎಂದು ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

01/08/2026 08:48 pm

Cinque Terre

2.76 K

Cinque Terre

0

ಸಂಬಂಧಿತ ಸುದ್ದಿ