ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾಲಿಕೆ ವ್ಯಾಪ್ತಿಯಲ್ಲಿ ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಯಾನಕ್ಕೆ ಸಾರ್ವಜನಿಕರು ಕೈ ಜೋಡಿಸಿ: ಆಯುಕ್ತ ಕೆ.ಎನ್. ರಮೇಶ್

ಬೆಂಗಳೂರು:ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ರವರ ನಿರ್ದೇಶನದಂತೆ ಸ್ವಚ್ಛ, ಸುಂದರ, ತ್ಯಾಜ್ಯ ಮುಕ್ತ ನಗರ ನಿರ್ಮಾಣದ ಗುರಿಯೊಂದಿಗೆ ಬೆಂಗಳೂರು ದಕ್ಷಿಣ ನಗರ ಪಾಲಿಕೆ, ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಹಾಗೂ ವಿವಿಧ ಅಂಗ ಸಂಸ್ಥೆಗಳ ಸಹಯೋಗದಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಹೆಚ್‌.ಎಸ್‌.ಆ‌ರ್. ಬಡಾವಣೆ 4ನೇ ಸೆಕ್ಟರ್ 19ನೇ ಮುಖ್ಯರಸ್ತೆಯಲ್ಲಿ ಇದ್ದ ಕಟ್ಟಡ ತ್ಯಾಜ್ಯ ತೆರವುಗೊಳಿಸುವ ಮೂಲಕ *ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಯಾನಕ್ಕೆ ಪಾಲಿಕೆ ಆಯುಕ್ತರಾದ ಕೆ.ಎನ್. ರಮೇಶ್ರವರು ಹಾಗೂ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಸತೀಶ್ ರೆಡ್ಡಿರವರು ಚಾಲನೆ ನೀಡಿದರು.

ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಗಸ್ಟ್ ತಿಂಗಳಲ್ಲಿ ನಡೆಯಲಿರುವ ಈ ಅಭಿಯಾನದ ಮೂಲಕ ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು, ಖಾಲಿ ನಿವೇಶನಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಸುರಿಯಲಾಗಿರುವ ಕಟ್ಟಡ ನಿರ್ಮಾಣ ತ್ಯಾಜ್ಯ, ಹಾಗೂ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗಿರುವ ಇತರೆ ತ್ಯಾಜ್ಯಗಳನ್ನು ಸಂಪೂರ್ಣವಾಗಿ ತೆರವುಗೊಳಿಸಿ ಪರಿಸರ ಸ್ನೇಹಿ, ಸುರಕ್ಷಿತ ಹಾಗೂ ಸ್ವಚ್ಛ ನಗರ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಆಯುಕ್ತರು ತಿಳಿಸಿದರು.

ಈ ಸಂದರ್ಭದಲ್ಲಿ ಪಾಲಿಕೆ ಮುಖ್ಯ ಅಭಿಯಂತರರಾದ ಶ್ರೀ ಬಸವರಾಜ್ ಕಬಾಡೆ, ಕೆ.ವಿ. ರವಿ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

01/08/2026 10:43 pm

Cinque Terre

60

Cinque Terre

0

ಸಂಬಂಧಿತ ಸುದ್ದಿ