ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದ್ದು, ಭಾರತೀಯ ಹವಾಮಾನ ಇಲಾಖೆ ಇಂದು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಜಿಲ್ಲೆಯಾದ್ಯಂತ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ನಿರಂತರ ಮಳೆಯ ಪರಿಣಾಮ ನದಿ, ಹಳ್ಳ-ಕೊಳ್ಳಗಳ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದ್ದು, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಆತಂಕ ಎದುರಾಗಿದೆ. ಬೆಟ್ಟಗುಡ್ಡ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಯೂ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ. ನದಿ ಪಾತ್ರದ ನಿವಾಸಿಗಳು, ಗುಡ್ಡಗಾಡು ಪ್ರದೇಶದ ಜನರು ಎಚ್ಚರ ವಹಿಸುವಂತೆ ಮನವಿ ಮಾಡಿದೆ. ತುರ್ತು ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಹಾಗೂ ವಿಪತ್ತು ನಿರ್ವಹಣಾ ತಂಡಗಳನ್ನು ಸಜ್ಜುಗೊಳಿಸಲಾಗಿದೆ. ಮಳೆಯ ಪರಿಸ್ಥಿತಿಯನ್ನು ಅಧಿಕಾರಿಗಳು ನಿರಂತರವಾಗಿ ಪರಿಶೀಲಿಸುತ್ತಿದ್ದು, ಹವಾಮಾನ ಇಲಾಖೆಯ ಮುಂದಿನ ಸೂಚನೆಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
Kshetra Samachara
02/08/2026 06:14 am
LOADING...