ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಧಾರಾಕಾರ ಮಳೆ - ಭೂಕುಸಿತದ ನಡುವೆಯೂ ಹರಿದುಬಂದ ಪ್ರವಾಸಿಗರು!

ಚಿಕ್ಕಮಗಳೂರು: ಮಲೆನಾಡು ಹಾಗೂ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಮಳೆಯ ಅವಾಂತರಗಳ ನಡುವೆಯೂ ಕಾಫಿನಾಡಿಗೆ ಪ್ರವಾಸಿಗರು ಸಾಗರೋಪಾದಿಯಲ್ಲಿ ಹರಿದುಬರುತ್ತಿದ್ದಾರೆ.

ದತ್ತಪೀಠ ರಸ್ತೆಯಲ್ಲಿ ಭೂಕುಸಿತ ಉಂಟಾಗಿದ್ದರೂ, ಜಿಲ್ಲಾಡಳಿತ ಸೂಕ್ತ ಮುನ್ನೆಚ್ಚರಿಕೆ ವಹಿಸದ ಹಿನ್ನೆಲೆಯಲ್ಲಿ ಕುಸಿದ ರಸ್ತೆಯಲ್ಲೇ ಅಪಾಯಕಾರಿಯಾಗಿ ಸಾವಿರಾರು ವಾಹನಗಳು ಸಂಚರಿಸುತ್ತಿವೆ.

ಮತ್ತೊಂದೆಡೆ, ಗಿರಿಶ್ರೇಣಿಗೆ ತೆರಳುವ ಕೈಮರ ಚೆಕ್‌ಪೋಸ್ಟ್‌ನಲ್ಲಿ ತೀವ್ರ ಸಂಚಾರ ದಟ್ಟಣೆ ಉಂಟಾಗಿದ್ದು, ಪ್ರವಾಸಿಗರ ವಾಹನಗಳು ಗಂಟೆಗಟ್ಟಲೆ ಕ್ಯೂನಲ್ಲಿ ನಿಲ್ಲುವಂತಾಗಿದೆ.

ಈ ಬಗ್ಗೆ ನಮ್ಮ ಚಿಕ್ಕಮಗಳೂರು ಪ್ರತಿನಿಧಿ ಡ್ಯಾನಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

Edited By :
PublicNext

PublicNext

02/08/2026 12:41 pm

Cinque Terre

8.47 K

Cinque Terre

0

ಸಂಬಂಧಿತ ಸುದ್ದಿ