ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ: ಪೊಲೀಸ್ ನೇಮಕಾತಿ ಪರೀಕ್ಷೆ ಹಿನ್ನೆಲೆ ಸರ್ವರ್ ಡೌನ್ - ಆತಂಕದಲ್ಲಿ ವಿದ್ಯಾರ್ಥಿಗಳು

ಕಲಬುರಗಿ: ರಾಜ್ಯಾದ್ಯಂತ ಪೊಲೀಸ್ ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು, ಕಲಬುರಗಿಯಲ್ಲಿ ಸರ್ವರ್ ಸಮಸ್ಯೆ ಎದುರಾಗಿದೆ.

ಕಲಬುರಗಿ ಪದವಿ ಪೂರ್ವ ಮಹಿಳಾ ಕಾಲೇಜಿನಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಸರ್ವರ್ ಸಮಸ್ಯೆ ಕಾಣಿಸಿಕೊಂಡಿದ್ದು, ಬರೋಬ್ಬರಿ 500 ಅಭ್ಯರ್ಥಿಗಳು ಈ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.

ಕಲಬುರಗಿಯ ಬಹುತೇಕ ಪರೀಕ್ಷಾ ಕೇಂದ್ರಗಳಲ್ಲಿ ಸರ್ವರ್ ಡೌನ್ ಸಮಸ್ಯೆ ಎದುರಾಗಿದ್ದು, ಪರೀಕ್ಷೆ ಬರೆಯುವ ಅಭ್ಯರ್ಥಿಗಳಲ್ಲಿ ಆತಂಕ ಉಂಟಾಗಿದೆ.

ಸರ್ವರ್ ಸಮಸ್ಯೆಯಿಂದಾಗಿ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು ಕೂಡ ತಲೆಕೆಡಿಸಿಕೊಂಡಿದ್ದು, ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

Edited By :
PublicNext

PublicNext

02/08/2026 01:04 pm

Cinque Terre

10.19 K

Cinque Terre

0