ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಆರ್.ಎಂ.ಸಿ. ಯಾರ್ಡ್‌ ಮುಂಭಾಗ ಭೀಕರ ಅಪಘಾತ - KSRTC ಬಸ್‌ಗೆ ಸಿಲುಕಿ 65 ವರ್ಷದ ವೃದ್ಧ ಸಾವು

ಬೆಂಗಳೂರು: ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿ 65 ವರ್ಷದ ವೃದ್ಧರೊಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿರುವ ಘಟನೆ ನಗರದ ಆರ್.ಎಂ.ಸಿ. ಯಾರ್ಡ್ ಪೊಲೀಸ್ ಠಾಣೆಯ ಮುಂಭಾಗ ನಡೆದಿದೆ.

ಬೆಂಗಳೂರಿನಿಂದ ಅರಕಲಗೂಡಿನತ್ತ ಹೊರಟಿದ್ದ KSRTC ಬಸ್ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ದಾಟುತ್ತಿದ್ದ ವೃದ್ಧನಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವೃದ್ಧ ಬಸ್‌ನ ಚಕ್ರಕ್ಕೆ ಸಿಲುಕಿದ್ದು, ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಯಶವಂತಪುರ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತ ವೃದ್ಧನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಅವರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.

Edited By :
PublicNext

PublicNext

02/08/2026 01:16 pm

Cinque Terre

12.53 K

Cinque Terre

0

ಸಂಬಂಧಿತ ಸುದ್ದಿ