ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕ್ಯಾಂಟರ್ ಹಾಗೂ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ - ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ತಾಲೂಕಿನ ವಿಶ್ವನಾಥಪುರ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪೊಲೀಸರ ಪ್ರಾಥಮಿಕ ಮಾಹಿತಿಯಂತೆ, ದೊಡ್ಡಬಳ್ಳಾಪುರ ಕಡೆಯಿಂದ ದೇವನಹಳ್ಳಿ ಕಡೆಗೆ ಅತಿ ವೇಗವಾಗಿ ಬರುತ್ತಿದ್ದ ಕ್ಯಾಂಟರ್ ಲಾರಿಯ ಚಾಲಕನ ಅಜಾಗರೂಕ ಚಾಲನೆಯಿಂದ ಮುಂದೆ ಸಂಚರಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್ ಸಂಪೂರ್ಣ ಜಖಂಗೊಂಡಿದೆ.

ಅಪಘಾತದಲ್ಲಿ ಬೈರದೇನಹಳ್ಳಿ ಗ್ರಾಮದ ಮುನಿರಾಜು (28) ಹಾಗೂ ಬೀರಸಂದ್ರ ಗ್ರಾಮದ ಮುನಿರಾಜು (32) ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ವಿಶ್ವನಾಥಪುರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Edited By : Nagaraj Tulugeri
PublicNext

PublicNext

02/08/2026 02:50 pm

Cinque Terre

7.75 K

Cinque Terre

0

ಸಂಬಂಧಿತ ಸುದ್ದಿ