ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕದ್ದುಮುಚ್ಚಿ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ ಎಂಬ ಆರೋಪ ಸುಳ್ಳು- ಸಿದ್ದರಾಮಯ್ಯ

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು. ಸಭೆಯಲ್ಲಿ ಮಾತನಾಡಿದ ಅವರು, ಮಳೆ ಕೈಕೊಟ್ಟ ಸಂದರ್ಭದಲ್ಲಿ ಕಾವೇರಿ ನದಿ ನೀರಿನ ವಿಚಾರದಲ್ಲಿ ಸಭೆ ಕರೆಯುವ ವಾಡಿಕೆ ಇದೆ.

ಪ್ರಸ್ತುತ ಕೊಡಗು ಹಾಗೂ ವಯನಾಡ್ ಭಾಗದಲ್ಲಿ ಮಳೆಯಾಗುತ್ತಿದ್ದು ಕಬಿನಿ, ಹಾರಂಗಿ ಜಲಾಶಯ ಭರ್ತಿಯಾಗಿದೆ. ಕೆಆರ್‌ಎಸ್ ಅಣೆಕಟ್ಟೆಯಲ್ಲಿ 19 TMC ನೀರಿದೆ. ಎಲ್ ನಿನೋ ಪರಿಣಾಮ ಬರಪರಿಸ್ಥಿತಿ ಉಂಟಾಗಿದೆ. ಕುಡಿಯುವ ನೀರಿಗಾಗಿ ನಾವು ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಹೀಗಾಗಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು.

ನೀರಿನ ಸಂಗ್ರಹಣೆ ಬಗ್ಗೆ ಕೇಂದ್ರ ಸರ್ಕಾರ, ನದಿ ನೀರು ಪ್ರಾಧಿಕಾರ ಹಾಗೂ ತಮಿಳುನಾಡಿಗೆ ಮಾಹಿತಿ ಇದೆ. ಇದು ಸುಳ್ಳು ಎಂದಿದ್ದಾರೆ. ಆದರೂ ಪ್ರಾಧಿಕಾರದ ಆದೇಶದ ಪ್ರಕಾರ ನೀರು ಕೊಡಲೇಬೇಕಾಗುತ್ತದೆ. ಈ ಹಿಂದೆ ಅರ್ಜಿ ವಜಾವಾಗಿದೆ. ಇಲ್ಲದಿದ್ದರೆ ರಾಜ್ಯ ಮತ್ತು ರಾಜ್ಯದ ರೈತರ ಹಿತ ಕಾಯುವುದು ಕಷ್ಟ.

ಇದು ಭಾವಾವೇಶದ ವಿಚಾರ. ರೈತರ ನೆರವಿಗೆ ಧಾವಿಸುವುದು ಸರ್ಕಾರದ ಕರ್ತವ್ಯ ನಾವು ಸಂಕಷ್ಟ ಪರಿಹಾರ ಸೂತ್ರಕ್ಕೆ ಒತ್ತಾಯಿಸಬೇಕು. ಕಬಿನಿ, ಹಾರಂಗಿ ಜಲಾಶಯ ತುಂಬಿರುವುದರಿಂದ ಸಮಸ್ಯೆ ಬಗೆಹರಿಯುವ ಸಾಧ್ಯತೆ ಇದೆ. ಈ ವಿವಾದ ಆಗಾಗ ಎದುರಾಗುವುದರಿಂದ ಸರ್ಕಾರಕ್ಕೆ ತಲೆನೋವು ತಪ್ಪಿದ್ದಲ್ಲ.

Edited By :
PublicNext

PublicNext

02/08/2026 03:02 pm

Cinque Terre

46.8 K

Cinque Terre

0