ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನಲ್ಲಿ ಭೀಕರ ಗುಡ್ಡ ಕುಸಿತ ಸಂಭವಿಸಿದ್ದು, ಭಾರೀ ಪ್ರಮಾಣದ ಮಣ್ಣು ಕುಸಿದು ಬಿದ್ದಿದೆ. ಮಣ್ಣಿನಡಿ ಸಿಲುಕಿದ್ದ ಮಲ್ಲಿಕಾರ್ಜುನ ಎಂಬುವವರ ಮೃತದೇಹವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿ ಹೊರತೆಗೆದಿದ್ದಾರೆ.
ಘಟನೆಯಲ್ಲಿ ಇನ್ನು ಇಬ್ಬರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರಿಗಾಗಿ ರಕ್ಷಣಾ ಪಡೆಯ ಶೋಧಕಾರ್ಯ ತೀವ್ರವಾಗಿ ಮುಂದುವರಿದಿದೆ. ಸ್ಥಳದಲ್ಲಿ ಜೆಸಿಬಿ ಯಂತ್ರಗಳನ್ನು ಬಳಸಿ ಮಣ್ಣು ತೆರವುಗೊಳಿಸುವ ಕಾರ್ಯಾಚರಣೆ ಭರದಿಂದ ಸಾಗಿದೆ.
ವಿಷಯ ತಿಳಿಯುತ್ತಿದ್ದಂತೆ ತಾಲೂಕು ಆಡಳಿತ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ದುರಂತದಿಂದ ತೀರ್ಥಹಳ್ಳಿ ಸುತ್ತಮುತ್ತಲಿನ ಸಾರ್ವಜನಿಕರಲ್ಲಿ ಭಾರೀ ಆತಂಕ ಮತ್ತು ಭೀತಿಯ ವಾತಾವರಣ ಮನೆಮಾಡಿದೆ.
PublicNext
02/08/2026 03:38 pm
LOADING...