ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ಕೊಡಗಿನಲ್ಲಿ ಮುಂದುವರೆದ ಮಳೆ; ತ್ರಿವೇಣಿ ಸಂಗಮ ಸ್ಥಳ ಜಲಾವೃತ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆರಾಯನ ಅಬ್ಬರ ಮತ್ತೆ ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ ಇಂದು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ ಕೆಲ ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ. ಬ್ರಹ್ಮಗಿರಿ ತಪ್ಪಲು ಪ್ರದೇಶ ಸೇರಿದಂತೆ ಜಿಲ್ಲೆಯ ಹಲವೆಡೆ ಭಾರಿ ಗಾಳಿ-ಮಳೆಯಾಗುತ್ತಿದ್ದು, ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಭಾಗಮಂಡಲದ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತವಾಗಿದ್ದು, ಪ್ರವಾಹದ ನೀರು ಸುತ್ತಮುತ್ತಲಿನ ಪ್ರದೇಶಗಳನ್ನು ಆವರಿಸಿದೆ. ಮಡಿಕೇರಿ–ಭಾಗಮಂಡಲ ಹಾಗೂ ನಾಪೋಕ್ಲು–ಭಾಗಮಂಡಲ ರಸ್ತೆಗಳ ಮೇಲೂ ನೀರು ಹರಿಯುತ್ತಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಸಾರ್ವಜನಿಕರು ಮತ್ತು ವಾಹನ ಸವಾರರು ಮೇಲ್ಸೇತುವೆಗಳಲ್ಲಿ ಸಂಚರಿಸುತ್ತಿದ್ದಾರೆ. ಬೆಟ್ಟಗುಡ್ಡ, ನದಿ ಪಾತ್ರ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

Edited By : Somashekar
PublicNext

PublicNext

02/08/2026 04:02 pm

Cinque Terre

13.63 K

Cinque Terre

0

ಸಂಬಂಧಿತ ಸುದ್ದಿ