ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಕಾನ್ಸ್‌ಟೇಬಲ್ ನೇಮಕ ಪರೀಕ್ಷೆಯಲ್ಲಿ ಗೊಂದಲ; ವಿದ್ಯಾರ್ಥಿಗಳ ಪ್ರತಿಭಟನೆ, ಲಾಠಿ ಪ್ರಹಾರ ಆರೋಪ

ವಿಜಯಪುರ: ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದ ಕೋಟ್ಯಾಳ್ ರಸ್ತೆಯಲ್ಲಿರುವ ಶಾರದಾಂಬಾ ಪಿಯು ಕಾಲೇಜಿನಲ್ಲಿ ನಡೆದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪ್ರವೇಶ ಪರೀಕ್ಷೆ ವೇಳೆ ಗೊಂದಲ ಉಂಟಾಗಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.

ಬೆಳಿಗ್ಗೆ 10.30ಕ್ಕೆ ಆರಂಭವಾಗಬೇಕಿದ್ದ ಪರೀಕ್ಷೆಗೆ ಪ್ರಶ್ನೆ ಪತ್ರಿಕೆ ಸುಮಾರು ಅರ್ಧ ಗಂಟೆ ತಡವಾಗಿ, 11 ಗಂಟೆಗೆ ವಿತರಿಸಲಾಯಿತು. ಇದೇ ವೇಳೆ ಒಬ್ಬ ಪೊಲೀಸ್ ಸಿಬ್ಬಂದಿ ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರದಿಂದ ಹೊರಗೆ ತೆಗೆದುಕೊಂಡು ಹೋಗಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.

ಈ ಬೆಳವಣಿಗೆಯಿಂದ ಆಕ್ರೋಶಗೊಂಡ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಎದುರು ಪ್ರತಿಭಟನೆ ನಡೆಸಿದರು. ಕೆಲವರು ಕಾಲೇಜಿನ ಗೇಟ್ ಮುರಿದು ಒಳನುಗ್ಗಲು ಯತ್ನಿಸಿದರು. ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ ಎನ್ನಲಾಗಿದೆ.

ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಲಕ್ಷ್ಮಣ ನಿಂಬರಗಿ ಕೂಡ ಸ್ಥಳದಲ್ಲಿದ್ದು ಪರಿಸ್ಥಿತಿಯನ್ನು ನಿಯಂತ್ರಿಸಲು ಕ್ರಮ ಕೈಗೊಂಡರು. ಲಾಠಿ ಪ್ರಹಾರದ ಬಳಿಕ ವಿದ್ಯಾರ್ಥಿಗಳು ಸ್ಥಳದಿಂದ ಚದುರಿದರು.

Edited By :
PublicNext

PublicNext

02/08/2026 05:54 pm

Cinque Terre

13.67 K

Cinque Terre

0

ಸಂಬಂಧಿತ ಸುದ್ದಿ