ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಳಪೆ ಆಹಾರ ಸೇವಿಸಿ 55 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಕರ್ತವ್ಯಲೋಪ ಹಾಗೂ ಬೇಜವಾಬ್ದಾರಿತನ ತೋರಿದ ಹಿನ್ನೆಲೆಯಲ್ಲಿ ಶಾಲೆಯ ಪ್ರಾಂಶುಪಾಲ ಶರಣಬಸಪ್ಪ ಪಾಟೀಲ ಮತ್ತು ವಾರ್ಡನ್ ರವಿ ವಾಲಿ ಅವರನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಶಿವಸ್ವಾಮಿ ಬಿ. ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ವಿದ್ಯಾರ್ಥಿಗಳ ಆರೋಗ್ಯದ ಸುರಕ್ಷತೆ ಮತ್ತು ಆಹಾರದ ಗುಣಮಟ್ಟ ಕಾಪಾಡುವುದು ಅಧಿಕಾರಿಗಳ ಪ್ರಮುಖ ಜವಾಬ್ದಾರಿಯಾಗಿತ್ತು. ಆದರೆ ನಿರ್ಲಕ್ಷ್ಯದಿಂದ 55 ವಿದ್ಯಾರ್ಥಿಗಳು ಏಕಕಾಲದಲ್ಲಿ ಅಸ್ವಸ್ಥರಾಗಿದ್ದಾರೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಪ್ರಾಥಮಿಕ ಪರಿಶೀಲನೆಯಲ್ಲಿ ಕರ್ತವ್ಯ ನಿರ್ಲಕ್ಷ್ಯ ಕಂಡುಬಂದ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ ಈ ಕ್ರಮ ಕೈಗೊಳ್ಳಲಾಗಿದೆ.
ಇದಕ್ಕೂ ಮುನ್ನ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ ನೀಡಿದ ವರದಿ ಆಧಾರದ ಮೇಲೆ ಐವರು ಅಡುಗೆ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಲಾಗಿತ್ತು.
Kshetra Samachara
02/08/2026 06:33 pm
LOADING...