ಶಿವಮೊಗ್ಗ: ಶಿವಮೊಗ್ಗ ನಗರದ ಹೊರವಲಯದ ಉಂಬ್ಳೇಬೈಲು ಸಮೀಪ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 55 ವರ್ಷದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನ್ಯಾನೋ ಕಾರು ಹಾಗೂ ಐ20 ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಈ ಅವಘಡ ನಡೆದಿದೆ.
ಉಂಬ್ಳೇಬೈಲು ಮರಾಠಿ ಕ್ಯಾಂಪ್ ಬಳಿ ಉಂಬ್ಳೇಬೈಲು ಕಡೆಯಿಂದ ಜಂಕ್ಷನ್ ಕಡೆಗೆ ಚಲಿಸುತ್ತಿದ್ದ ನ್ಯಾನೋ ಕಾರು ಅತಿ ವೇಗವಾಗಿ ಬಂದು, ರಸ್ತೆಯಲ್ಲಿ ಬಲಭಾಗಕ್ಕೆ ತಿರುವು ಪಡೆಯುವ ವೇಳೆ ಎದುರಿನಿಂದ ಬರುತ್ತಿದ್ದ ಐ20 ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನ್ಯಾನೋ ಕಾರು ಸಂಪೂರ್ಣ ಜಖಂಗೊಂಡಿದ್ದು, ಅದರಲ್ಲಿದ್ದ ವ್ಯಕ್ತಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಉಂಬ್ಳೇಬೈಲಿನ ವಿಜೇಂದ್ರ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಐ20 ಕಾರಿಗೂ ಹಾನಿಯಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ತುಂಗಾನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
02/08/2026 07:10 pm
LOADING...