ಬೆಳಗಾವಿ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಆದೇಶದ ವಿರುದ್ಧ ಪ್ರತಿಭಟಿಸಲು ಆಗಸ್ಟ್ 13 ರಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿರುವ ರಾಜ್ಯ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ಬುಧವಾರ ಆಗಸ್ಟ್ 5 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ.
ಬುಧವಾರ ಮುಂಜಾನೆ 10 ಗಂಟೆಗೆ ಬೆಳಗಾವಿಯ ಸರ್ಕಿಟ್ ಹೌಸ್‌ನಲ್ಲಿ ಕನ್ನಡ ಸಂಘಟನೆಗಳ, ವಿವಿಧ ಸಮುದಾಯಗಳ, ರಿಕ್ಷಾ ಚಾಲಕರ ಸಂಘಟನೆಗಳ, ರಸ್ತೆ ಸಾರಿಗೆ ಸಂಸ್ಥೆಯ ಕನ್ನಡ ಕ್ರಿಯಾ ಸಮಿತಿಯ ಹಾಗೂ ರೈತ ಸಂಘಟನೆಗಳ ನಾಯಕರೊಂದಿಗೆ ವಾಟಾಳ್ ನಾಗರಾಜ್ ಮತ್ತು ಇತರ ನಾಯಕರು ಚರ್ಚೆ ನಡೆಸಲಿದ್ದಾರೆ.
ಕಾವೇರಿ ವಿಷಯದ ಜೊತೆಗೆ ಬೆಳಗಾವಿ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕರಿಸಬೇಕೆಂಬ ವಿಷಯವನ್ನು ಸಹ ಒಕ್ಕೂಟವು ಸೇರಿಸಿದೆಯೆಂದು ಬೆಂಗಳೂರಿನಲ್ಲಿ ಕಳೆದ ಶುಕ್ರವಾರ ನಡೆದ ಸಭೆಯಲ್ಲಿ ಉಪಸ್ಥಿತರಿದ್ದ ಕನ್ನಡ ಸೇನೆಯ ಬೆಳಗಾವಿ ಜಿಲ್ಲಾಧ್ಯಕ್ಷ ರಾಜು ಕೊಳ್ಳಾ ಅವರು ತಿಳಿಸಿದರು.
ಬೆಳಗಾವಿ ಪಾಲಿಕೆಯ ವಿಷಯವನ್ನು ವಾಟಾಳ್ ನಾಗರಾಜ್ ಅವರು ಕಳೆದ ಶುಕ್ರವಾರ ನಗರಾಭಿವೃದ್ಧಿ ಖಾತೆ ಸಚಿವ ಬೈರತಿ ಸುರೇಶ್ ಅವರೊಂದಿಗೆ ಚರ್ಚಿಸಿದ್ದಾರೆ. ತಾವು ಮುಖ್ಯಮಂತ್ರಿಗಳ ಗಮನಕ್ಕೆ ಈ ವಿಷಯವನ್ನು ತಂದಿರುವುದಾಗಿ ಸಚಿವರು ವಾಟಾಳ್ ನಾಗರಾಜ್ ಅವರಿಗೆ ತಿಳಿಸಿದರೆಂದು ಕೊಳ್ಳಾ ಅವರು ವಿವರಿಸಿದರು.
ಕರ್ನಾಟಕ ಬಂದ್ ಆಚರಣೆ ಸಂಬಂಧ ಸಭೆಯಲ್ಲಿ ಚರ್ಚೆ ನಡೆದು ಆಗಸ್ಟ್ 10 ರವರೆಗೆ ಪರಿಸ್ಥಿತಿಯನ್ನು ನೋಡಿಕೊಂಡು, ವಿವಿಧ ಸಂಘಟನೆಗಳೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲು ಸಭೆಯು ನಿರ್ಧರಿಸಿತು.
ಹಿರಿಯ ಕನ್ನಡ ಹೋರಾಟಗಾರ ಅಶೋಕ್ ಚಂದರಗಿ, ಗಡಿನಾಡು ಕನ್ನಡಿಗರ ಸೇನೆಯ ರಾಜ್ಯಾಧ್ಯಕ್ಷ ಬಲರಾಮ್ ಮಾಸೇನಟ್ಟಿ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದು ಸಲಹೆ-ಸೂಚನೆ ನೀಡಿದರು.
PublicNext
02/08/2026 07:48 pm
LOADING...