ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸರ್ಪನಕಟ್ಟೆ ವಲಯದಲ್ಲಿ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ; ನಾಯಕತ್ವ, ಆರೋಗ್ಯ ವಿಮೆ, ಬ್ಯಾಂಕಿಂಗ್ ಕುರಿತು ಮಾಹಿತಿ

ಉತ್ತರ ಕನ್ನಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಸರ್ಪನಕಟ್ಟೆ ವಲಯದಲ್ಲಿ ವಲಯ ಮಟ್ಟದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ತಾಲೂಕು ಯೋಜನಾಧಿಕಾರಿ ಲತಾ ಬಂಗೇರ, ಸ್ಥಳೀಯ ಒಕ್ಕೂಟದ ಅಧ್ಯಕ್ಷೆ ಲಕ್ಷ್ಮಿ ಶಾಸ್ತ್ರಿ, ಬಿ.ಸಿ. ಪ್ರಬಂಧಕ ಸುಕುಮಾರ ಹಾಗೂ ಎನ್‌ಆರ್‌ಎಲ್‌ಎಂ (NRLM) ಅಧಿಕಾರಿ ಗೋಪಾಲ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ತಾಲೂಕು ಯೋಜನಾಧಿಕಾರಿ ಲತಾ ಬಂಗೇರ ಅವರು, "ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಿನ್ನೆಲೆ, ಪ್ರಸ್ತುತ ಜಾರಿಯಲ್ಲಿರುವ ವಿಶೇಷ ಕಾರ್ಯಕ್ರಮಗಳು, ಯೋಜನೆಯಡಿ ಸದಸ್ಯರಿಗೆ ದೊರೆಯುವ ಸೌಲಭ್ಯಗಳು ಹಾಗೂ ಒಕ್ಕೂಟದ ಬಲವರ್ಧನೆಯಲ್ಲಿ ಪದಾಧಿಕಾರಿಗಳ ಜವಾಬ್ದಾರಿ ಕುರಿತು ವಿವರವಾದ ಮಾಹಿತಿ ನೀಡಿದರು."

ಎನ್‌ಆರ್‌ಎಲ್‌ಎಂ ಅಧಿಕಾರಿ ಗೋಪಾಲ್ ಅವರು ಸಂಪೂರ್ಣ ಸುರಕ್ಷಾ, ಆರೋಗ್ಯ ರಕ್ಷಾ, ಪಿಆರ್‌ಕೆ (PRK) ಸೇರಿದಂತೆ ವಿವಿಧ ಆರೋಗ್ಯ ವಿಮಾ ಯೋಜನೆಗಳ ಮಹತ್ವ ಹಾಗೂ ಅವುಗಳ ಪ್ರಯೋಜನಗಳ ಬಗ್ಗೆ ವಿವರಣೆ ನೀಡಿದರು.

ಬಿ.ಸಿ. ಪ್ರಬಂಧಕ ಸುಕುಮಾರ ಅವರು ಬ್ಯಾಂಕ್ ಸಾಲಗಳ ನವೀಕರಣ, ಮರುಪಾವತಿ, ಬ್ಯಾಂಕ್ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಡುವಿನ ಒಪ್ಪಂದಗಳು ಮತ್ತು ನಿಯಮಗಳ ಕುರಿತು ವಿವರಿಸಿದರು.

ವಲಯದ ಮೇಲ್ವಿಚಾರಕರು ಒಕ್ಕೂಟದ ಪದಾಧಿಕಾರಿಗಳ ಜವಾಬ್ದಾರಿ, ನಾಯಕತ್ವದ ಗುಣಗಳು ಹಾಗೂ ಸಂಘಟನೆಯನ್ನು ಬಲಪಡಿಸುವಲ್ಲಿ ಪದಾಧಿಕಾರಿಗಳ ಪಾತ್ರದ ಕುರಿತು ತರಬೇತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ವಲಯದ ಪದಾಧಿಕಾರಿಗಳು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತರಬೇತಿಯ ಪ್ರಯೋಜನ ಪಡೆದುಕೊಂಡರು.

Edited By :
Kshetra Samachara

Kshetra Samachara

02/08/2026 08:04 pm

Cinque Terre

1.47 K

Cinque Terre

0

ಸಂಬಂಧಿತ ಸುದ್ದಿ