ಶಿವಮೊಗ್ಗ: ರಾಜ್ಯದಲ್ಲಿ ಎದುರಾಗುವ ಬರಗಾಲವನ್ನು ಎದುರಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ, ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜೊತೆಯಾಗಿ ಕೆಲಸ ಮಾಡುವ ಕುರಿತು ಈಗಾಗಲೇ ಚರ್ಚೆಗಳು ನಡೆದಿವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಮುಖ್ಯಮಂತ್ರಿಗಳಿಗೆ ಸೂಕ್ತ ಮತ್ತು ಉತ್ತಮ ಸಲಹೆಗಳನ್ನು ನೀಡಿದ್ದಾರೆ.
ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಕೆಲವು ಅನುದಾನಗಳು ಬಾಕಿ ಇದ್ದು, ನೀರಾವರಿ ಯೋಜನೆಗಳ ವಿಷಯದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ಎಲ್ಲಾ ವಿಷಯಗಳ ಕುರಿತು ಗಂಭೀರ ಚರ್ಚೆಯಾಗುವ ಅಗತ್ಯವಿದೆ.
ದೇವರ ಆಶೀರ್ವಾದದಿಂದ ಸದ್ಯ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಪರಿಣಾಮವಾಗಿ ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಹೆಚ್ಚಳವಾಗಿದೆ ಎಂದರು.
PublicNext
02/08/2026 08:14 pm
LOADING...