ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಜೋಯಿಡಾ ಮತ್ತು ದಾಂಡೇಲಿ ತಾಲ್ಲೂಕಿನ ಅಂಗನವಾಡಿ, ಶಾಲೆ ಹಾಗೂ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಅವರು ಸೋಮವಾರ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ವಿಶೇಷವಾಗಿ ಶಿರಸಿಯಲ್ಲಿ ಭಾರೀ ಮಳೆಯಿಂದ ಹಲವು ಬಡಾವಣೆಗಳು ಜಲಾವೃತಗೊಂಡಿದ್ದು, ಅನೇಕ ಮನೆಗಳಿಗೆ ನೀರು ನುಗ್ಗಿದೆ. ನಗರದ ಕೋಟೆ ಕೆರೆ ಕೋಡಿ ಬಿದ್ದ ಪರಿಣಾಮ ರಸ್ತೆಗಳಲ್ಲಿ ನೀರು ಹರಿದು ವಾಹನ ಸಂಚಾರಕ್ಕೂ ತೊಂದರೆಯಾಗಿದೆ.
ಹವಾಮಾನ ಇಲಾಖೆಯು ಮುಂದಿನ ಕೆಲವು ದಿನಗಳವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
Kshetra Samachara
02/08/2026 09:58 pm
LOADING...