ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರಹ್ಮಾವರ: ​ಚಿನ್ನ, ಬೆಳ್ಳಿ ಕೆಲಸಗಾರರಿಗೆ ಸೂಕ್ತ ಭದ್ರತೆ ನೀಡಿ; ಪಿ. ಸುಜ್ಞಾನ ಮೂರ್ತಿ

ಬ್ರಹ್ಮಾವರ : ​ಉಡುಪಿ ಜಿಲ್ಲಾ ಚಿನ್ನ-ಬೆಳ್ಳಿ ಕೆಲಸಗಾರರ ಸಂಘದ ವತಿಯಿಂದ ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ವಿಶೇಷ ಸಭೆಯು ಶನಿವಾರ ಜರುಗಿತು. ಸಂಘದ ಅಧ್ಯಕ್ಷ ರವಿಚಂದ್ರ ಆಚಾರ್ಯ ಮಾರಾಳಿ ಅಧ್ಯಕ್ಷತೆ ವಹಿಸಿದ್ದರು.

​ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ಸುಜ್ಞಾನ ಮೂರ್ತಿ, "1967ರಲ್ಲಿ ಚಿನ್ನ ನಿಯಂತ್ರಣ ಕಾಯ್ದೆ ಜಾರಿಗೆ ಬಂದಾಗ ದೇಶದಾದ್ಯಂತ ಚಿನ್ನ-ಬೆಳ್ಳಿ ಕೆಲಸಗಾರರ ಮಕ್ಕಳಿಗೆ ಸರ್ಕಾರಿ ಉದ್ಯೋಗ ನೀಡಲಾಗಿತ್ತು. ಆದರೆ, ಇಂದಿನ ಪ್ರಧಾನಿಯವರು 'ಒಂದು ವರ್ಷ ಚಿನ್ನ ಖರೀದಿಸಬೇಡಿ' ಎಂದು ದೇಶದ ಜನತೆಗೆ ಕರೆ ಕೊಟ್ಟಿದ್ದರ ಪರಿಣಾಮವಾಗಿ, ಕೆಲಸಗಾರರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ಕುರಿತು ತುರ್ತು ಗಮನ ಹರಿಸಬೇಕು" ಎಂದು ಆಗ್ರಹಿಸಿದರು.

​ಇದೇ ಸಂದರ್ಭದಲ್ಲಿ ಸಂಘದ ಸದಸ್ಯರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು. ಅಲ್ಲದೆ, ಇದೇ ವರ್ಷದ ಅಂತ್ಯದಲ್ಲಿ ಉಡುಪಿಯಲ್ಲಿ ನಡೆಯಲಿರುವ ಸಂಘದ ರಜತ ಮಹೋತ್ಸವ ಆಚರಣೆಯ ಲಾಂಛನವನ್ನು ಬಿಡುಗಡೆಗೊಳಿಸಲಾಯಿತು.

​ಕಾರ್ಯಕ್ರಮದಲ್ಲಿ ಉದ್ಯಮಿ ಪ್ರಸಾದ್ ರಾಜ್ ಕಾಂಚನ್, ಸಂಘದ ಕಾನೂನು ಸಲಹೆಗಾರರಾದ ಗಂಗಾಧರ ಎಚ್., ಗೌರವಾಧ್ಯಕ್ಷರಾದ ಬಾಲಕೃಷ್ಣ ಕಪ್ಪೆಟ್ಟು ಹಾಗೂ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು

Edited By :
PublicNext

PublicNext

02/08/2026 10:23 pm

Cinque Terre

16.47 K

Cinque Terre

0

ಸಂಬಂಧಿತ ಸುದ್ದಿ