ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಕೊಪ್ಪ, ಶೃಂಗೇರಿ ತಾಲೂಕಿನ ಶಾಲೆಗಳಿಗೆ ಆ. 3ರಂದು ರಜೆ ಘೋಷಣೆ

ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಹಾಗೂ ಶೃಂಗೇರಿ ತಾಲೂಕುಗಳ ಅಂಗನವಾಡಿ, ಶಿಶುಪಾಲನಾ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆಗಸ್ಟ್ 3, 2026 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಆದೇಶ ಹೊರಡಿಸಿದ್ದಾರೆ.

ಕೇಂದ್ರ ಜಲ ಆಯೋಗ (CWC) ಎಚ್ಚರಿಕೆ ನೀಡಿದ್ದು, ತುಂಗಾ ನದಿಯ ನೀರಿನ ಮಟ್ಟವು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ರಜೆಯು ಕೊಪ್ಪ ಮತ್ತು ಶೃಂಗೇರಿ ತಾಲೂಕಿನ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗಲಿದ್ದು, ರಜೆಯಿಂದಾಗಿ ನಷ್ಟವಾಗುವ ದಿನಗಳನ್ನು ಮುಂಬರುವ ಸಾರ್ವತ್ರಿಕ ರಜಾ ದಿನಗಳಲ್ಲಿ ಸರಿದೂಗಿಸಿಕೊಳ್ಳಲು ಸೂಚಿಸಲಾಗಿದೆ.

ತುಂಗಾ ನದಿಯಲ್ಲಿ ಪ್ರವಾಹದ ಅಪಾಯವಿರುವುದರಿಂದ ಸಾರ್ವಜನಿಕರು, ಪ್ರವಾಸಿಗರು ಹಾಗೂ ಮಕ್ಕಳು ಯಾವುದೇ ಕಾರಣಕ್ಕೂ ನದಿ, ಹೊಳೆ, ಕೆರೆ ಮುಂತಾದ ಜಲಮೂಲಗಳ ಬಳಿ ತೆರಳಬಾರದು ಎಂದು ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ.

Edited By :
Kshetra Samachara

Kshetra Samachara

02/08/2026 10:46 pm

Cinque Terre

2.78 K

Cinque Terre

0

ಸಂಬಂಧಿತ ಸುದ್ದಿ