ಶಿವಮೊಗ್ಗ: ತೀರ್ಥಹಳ್ಳಿ ಪಟ್ಟಣದ ಗಾಂಧಿನಗರದ ಇಂದಿರಾನಗರ ಬಡಾವಣೆಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಭೀಕರ ಗುಡ್ಡ ಕುಸಿತ ದುರಂತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಲಿ ಕಾರ್ಮಿಕರನ್ನು ಇಲ್ಲಿ ವಾಸಕ್ಕೆ ಕರೆತಂದಿದ್ದ ಕಟ್ಟಡ ಮಾಲೀಕ ರಮೇಶ್ ಗೌಡ ವಿರುದ್ಧ ನಿರ್ಲಕ್ಷ್ಯದ ಆರೋಪದಡಿ ತೀರ್ಥಹಳ್ಳಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ನಿರಂತರ ಮಳೆಯ ಅಬ್ಬರದಿಂದ ಭಾನುವಾರ ಮುಂಜಾನೆ ಸುಮಾರು 2.30 ಗಂಟೆ ವೇಳೆಗೆ ಗುಡ್ಡದ ಮಣ್ಣು ಹಾಗೂ ತಡೆಗೋಡೆ ಏಕಾಏಕಿ ಜರಿದು ಕೆಳಭಾಗದಲ್ಲಿದ್ದ ಶೆಡ್‌ಗಳ ಮೇಲೆ ಬಿದ್ದಿದೆ. ಈ ವೇಳೆ ಶೆಡ್‌ನಲ್ಲಿ ಮಲಗಿದ್ದ ಒಂದೇ ಕುಟುಂಬದ ಸದಸ್ಯರು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ.
ಮೃತರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೊಕ್ಕರೆಗಾರು ಗ್ರಾಮದ ಮಲ್ಲಿಕಾರ್ಜುನ (35), ಪತ್ನಿ ನಾಗವೇಣಿ (28) ಹಾಗೂ ಪುತ್ರ ಸಂತೋಷ್ (3) ಎಂದು ಗುರುತಿಸಲಾಗಿದೆ. ಪಕ್ಕದ ಶೆಡ್‌ನಲ್ಲಿ ವಾಸವಿದ್ದ ಹನುಮಂತ (31) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ದುರ್ಘಟನೆಗೆ ಸಂಬಂಧಿಸಿದಂತೆ ಕೂಲಿ ಕಾರ್ಮಿಕರಿಗೆ ಸ್ಥಳದಲ್ಲಿ ವಾಸಕ್ಕೆ ವ್ಯವಸ್ಥೆ ಮಾಡಿದ್ದ ಕಟ್ಟಡ ಮಾಲೀಕ ರಮೇಶ್ ಗೌಡ ವಿರುದ್ಧ ನಿರ್ಲಕ್ಷ್ಯದ ಆರೋಪದಡಿ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಟ್ಟಡ ನಿರ್ಮಾಣಕ್ಕೆ ಅಗತ್ಯ ಪರವಾನಗಿ ಪಡೆಯದೆ ಕಾಮಗಾರಿ ನಡೆಸಿದ್ದ ಆರೋಪವೂ ಅವರ ಮೇಲಿದೆ..
PublicNext
03/08/2026 10:28 am
LOADING...