ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ: ಭೀಮಾ ನದಿಯಿಂದ ಅಕ್ರಮ ಮರಳು ಸಾಗಣೆ: ದಾಸ್ತಾನಿನ ಮೇಲೆ ಅಧಿಕಾರಿಗಳ ದಾಳಿ

ಕಲಬುರಗಿ: ಭೀಮಾ ನದಿಯಿಂದ ಅಕ್ರಮವಾಗಿ ಮರಳು ಸಂಗ್ರಹಿಸಿ ಜಮೀನೊಂದರಲ್ಲಿ ದಾಸ್ತಾನು ಮಾಡಿದ ಮರಳಿನ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ಸಂಗ್ರಹಿಸಿದ ಅಕ್ರಮ ಮರಳನ್ನು ಜಪ್ತಿ ಮಾಡಿದ್ದಾರೆ.

1,580 ಮೆಟ್ರಿಕ್ ಟನ್ ಅಕ್ರಮ ಮರಳು ಜಪ್ತಿ ಮಾಡಲಾಗಿದ್ದು, ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ವಿವಿಧ ಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು ₹13.55 ಲಕ್ಷ ಮೌಲ್ಯದ ಮರಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ನಾಲ್ವರ ವಿರುದ್ಧ ಎಫ್.ಐ.ಆರ್. (F.I.R.) ದಾಖಲಿಸಲಾಗಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂ ಅಧೀಕ್ಷಕ ಮಲ್ಲಿಕಾರ್ಜುನ ಜಂಬಗಿ ಒಳಗೊಂಡ ತಂಡದಿಂದ ಈ ಕಾರ್ಯಾಚರಣೆ ನಡೆದಿದೆ.

Edited By : PublicNext Desk
Kshetra Samachara

Kshetra Samachara

03/08/2026 10:33 am

Cinque Terre

280

Cinque Terre

0

ಸಂಬಂಧಿತ ಸುದ್ದಿ