ಕಲಬುರಗಿ: ರಾಜ್ಯಾದ್ಯಂತ ವರುಣನ ಅಬ್ಬರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎತ್ತಿಪೋತ ಜಲಪಾತ ಮೈತುಂಬಿ ಹರಿಯುತ್ತಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂ ಅರಣ್ಯ ಪ್ರದೇಶದಲ್ಲಿರುವ ಈ ಜಲಪಾತ ಬೆಟ್ಟ-ಗುಡ್ಡಗಳ ಮಧ್ಯೆ ಮೈದುಂಬಿ ಹರಿಯುತ್ತಿದೆ. ಪ್ರವಾಸಿಗರ ಮೆಚ್ಚಿನ ತಾಣವಾಗಿರುವ ಈ ಜಲಪಾತ, ಮಳೆಯಿಲ್ಲದ ಸಮಯದಲ್ಲಿ ನೋಡಲು ಬಂದ ಪ್ರವಾಸಿಗರಲ್ಲಿ ನಿರಾಸೆ ಮೂಡಿಸುತ್ತಿತ್ತು. ಆದರೆ ಈಗ ಮಳೆಯಾಗುತ್ತಿರುವ ಕಾರಣ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.
Kshetra Samachara
03/08/2026 10:53 am
LOADING...