ಕಲಬುರಗಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಉಜನಿ ಜಲಾಶಯದಿಂದ 2 ಲಕ್ಷ ಕ್ಯೂಸೆಕ್ಸ್‌ಗೂ ಹೆಚ್ಚು ನೀರು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಮಣ್ಣೂರಿನ ಯಲ್ಲಮ್ಮ ದೇವಸ್ಥಾನಕ್ಕೆ ಜಲದಿಗ್ಬಂಧನವಾಗಿದೆ.
ಕಲಬುರಗಿ ಜಿಲ್ಲೆಯ ಭೀಮಾ ನದಿಯಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ಭೀಮಾ ನದಿ ದಡದಲ್ಲಿರುವ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ತೆರಳುವ ಸೇತುವೆ ಸಂಪೂರ್ಣ ಮುಳುಗಡೆಯಾಗಿ ದೇವಸ್ಥಾನದ ಸಂಪರ್ಕ ಕಡಿತವಾಗಿದೆ.
ನೀರಿನ ಅಬ್ಬರ ಇನ್ನಷ್ಟು ಹೆಚ್ಚುವ ಸಾಧ್ಯತೆ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಭೀಮಾ ನದಿ ದಡದಲ್ಲಿರುವ ಗ್ರಾಮಸ್ಥರಿಗೆ ಕಲಬುರಗಿ ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದು, ನದಿ ತೀರಕ್ಕೆ ಜನ ಹಾಗೂ ಜಾನುವಾರುಗಳು ತೆರಳದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.
PublicNext
03/08/2026 11:26 am
LOADING...