ಕುಂದಗೋಳ: ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ನಿವೃತ್ತ ಸೈನಿಕರು ಹಾಗೂ ಸೇವಾನಿರತ ಸೈನಿಕರ ಕುಟುಂಬಸ್ಥರನ್ನು ಗೌರವಿಸುವ ಮೂಲಕ ಇಲ್ಲಿನ ಯುವ ಸಮೂಹವು ಸಮಾಜಕ್ಕೆ ಹೊಸ ಸಂದೇಶ ನೀಡಿದೆ.
ಹೌದು! ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ನಿರಾಮಯ ಫೌಂಡೇಶನ್ ಮೂಲಕ ಸ್ವಯಂಸೇವಾ ಕಾರ್ಯದಲ್ಲಿ ತೊಡಗಿರುವ ಯುವಕರ ತಂಡ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿತ್ತು.
ಈ ಸಂದರ್ಭದಲ್ಲಿ ನಿವೃತ್ತ ಸೈನಿಕರು, ಸೇವಾನಿರತ ಸೈನಿಕರ ಕುಟುಂಬಸ್ಥರು, ಮಾಧ್ಯಮ ಪ್ರತಿನಿಧಿಗಳು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರ ಸಾಧನೆಯನ್ನು ಗೌರವಿಸಲಾಯಿತು.
ಕುಂದಗೋಳ ಪಟ್ಟಣದ ಸವಾಯಿ ಗಂಧರ್ವ ಸ್ಮಾರಕ ಭವನದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿರಾಮಯ ಫೌಂಡೇಶನ್ ಸಂಸ್ಥಾಪಕ ಡಾ. ಮಲ್ಲಿಕಾರ್ಜುನ ಬಾಳಿಕಾಯಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಖ್ಯಾತ ವಾಗ್ಮಿ ಹಾಗೂ ರಾಷ್ಟ್ರೀಯ ಚಿಂತಕಿ ಭಾವನಾ ಆರ್. ಅವರು ಕಾರ್ಗಿಲ್ ಯುದ್ಧದ ಇತಿಹಾಸ ಮತ್ತು ಅದರ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮಕ್ಕೆ ಮುಳ್ಳೊಳ್ಳಿ ಶ್ರೀ ಶಿವಯೋಗೀಶ್ವರ ಮಹಾಸ್ವಾಮಿಗಳು ಹಾಗೂ ಅಭಿನವ ಕಲ್ಯಾಣಪುರ ಬಸವಣ್ಣನವರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಸೈನಿಕರ ಗೌರವದ ಪ್ರತೀಕವಾಗಿ ಶಿವಲಿಂಗಪ್ಪ ಹುಬ್ಬಳ್ಳಿ ಮತ್ತು ಎಸ್. ಬಿ. ಪಾಟೀಲ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 65 ಮಂದಿ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು.
ಶ್ರೀಧರ ಪೂಜಾರ, ಪಬ್ಲಿಕ್ ನೆಕ್ಸ್ಟ್ ಕುಂದಗೋಳ
Kshetra Samachara
03/08/2026 01:01 pm
LOADING...