ಚಿಕ್ಕಮಗಳೂರು / ಕಳಸ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಅದರಲ್ಲೂ ಕಳಸ ತಾಲೂಕಿನಲ್ಲಿ ವರುಣನ ಆರ್ಭಟ ಹಾಗೂ ಭದ್ರಾ ನದಿಯ ಅಬ್ಬರದಿಂದ ಹಲವೆಡೆ ಅಪಾರ ಹಾನಿ ಸಂಭವಿಸಿದೆ.
ಮಳೆರಾಯನ ಅಟ್ಟಹಾಸಕ್ಕೆ ಭದ್ರಾ ನದಿಯ ನೀರು ಅಪಾಯಕಾರಿ ಮಟ್ಟದಲ್ಲಿ ಹರಿದುಬಂದ ಪರಿಣಾಮ, ಕಳಸ ತಾಲೂಕಿನ ಸಂಸೆ ಸಮೀಪದ ಹೊಸಮಠ ಗ್ರಾಮದ ಅಶೋಕ್ ಎಂಬುವರ ಕೃಷಿ ತೋಟ ಜಲಾವೃತಗೊಂಡಿದೆ.
ಕಷ್ಟಪಟ್ಟು ಬೆಳೆಸಿದ್ದ ತೋಟಕ್ಕೆ ಪ್ರವಾಹದ ನೀರು ನುಗ್ಗಿ ಕಾಫಿ, ಅಡಿಕೆ, ಬಾಳೆ ಹಾಗೂ ಏಲಕ್ಕಿ ಗಿಡಗಳನ್ನು ಬುಡಸಮೇತ ಕೊಚ್ಚಿಕೊಂಡು ಹೋಗಿದೆ. ಫಸಲಿಗೆ ಬಂದಿದ್ದ ಕಾಫಿ ಗಿಡಗಳು ಸಂಪೂರ್ಣ ನಾಶವಾಗಿದ್ದು, ರೈತನ ಶ್ರಮವೆಲ್ಲ ನೀರುಪಾಲಾಗಿದೆ.
ಜೀವನೋಪಾಯಕ್ಕೆ ಆಸರೆಯಾಗಿದ್ದ ತೋಟ ಮತ್ತು ಮನೆಯನ್ನೂ ಕಳೆದುಕೊಂಡಿರುವ ಅಶೋಕ್ ದಂಪತಿ ಕಣ್ಣೀರಿಡುತ್ತಿದ್ದಾರೆ. ತಕ್ಷಣವೇ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂಕಷ್ಟದಲ್ಲಿರುವ ಈ ಕುಟುಂಬಕ್ಕೆ ಸೂಕ್ತ ನಷ್ಟಪರಿಹಾರ ಒದಗಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.
PublicNext
03/08/2026 01:21 pm
LOADING...