ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ಎಂ.ಆರ್. ರವಿಕುಮಾರ್ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ

ಕೋಲಾರ: ಕೋಲಾರ ಜಿಲ್ಲೆಗೆ ಹೊಸ ಜಿಲ್ಲಾಧಿಕಾರಿಯಾಗಿ ಎಂ.ಆರ್. ರವಿಕುಮಾರ್ ಅಧಿಕಾರ ಸ್ವೀಕರಿಸಿರುವುದು ಜಿಲ್ಲೆಯ ಆಡಳಿತದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದೆ. ಜಿಲ್ಲೆಯ ಮಣ್ಣಿನ ಮಗನೇ ಜಿಲ್ಲಾಧಿಕಾರಿಯಾಗಿ ಬಂದಿರುವುದು ಜನರಲ್ಲಿ ವಿಶೇಷ ನಿರೀಕ್ಷೆ ಮೂಡಿಸಿದ್ದು, ರೈತರ ಸಮಸ್ಯೆಗಳಿಗೆ ಆದ್ಯತೆ, ಜನಸಾಮಾನ್ಯರಿಗೆ ಸ್ಪಂದಿಸುವ ಆಡಳಿತ ಹಾಗೂ ಪಾರದರ್ಶಕ ಕಾರ್ಯವೈಖರಿ ತಮ್ಮ ಗುರಿಯಾಗಿದೆ ಎಂದು ಅವರು ಘೋಷಿಸಿರುವುದು ಗಮನ ಸೆಳೆದಿದೆ.

ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಎಂ.ಆರ್. ರವಿಕುಮಾರ್, "ಕೋಲಾರ ಜಿಲ್ಲೆಯ ಜನರ ಸೇವೆ ಮಾಡುವ ಅವಕಾಶ ದೊರೆತಿರುವುದು ನನ್ನ ಪಾಲಿನ ದೊಡ್ಡ ಜವಾಬ್ದಾರಿ. ಜಿಲ್ಲೆಯ ಪ್ರತಿಯೊಬ್ಬ ನಾಗರಿಕರಿಗೂ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸುತ್ತೇನೆ" ಎಂದು ಸ್ಪಷ್ಟಪಡಿಸಿದರು. ರೈತನೇ ಮೊದಲ ಆದ್ಯತೆ:ಕೋಲಾರ ಜಿಲ್ಲೆಯ ಆರ್ಥಿಕತೆಯ ಜೀವನಾಡಿಯಾದ ರೈತರ ಬದುಕು ಸುಧಾರಿಸುವುದು ತಮ್ಮ ಪ್ರಮುಖ ಆದ್ಯತೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

Edited By : PublicNext Desk
PublicNext

PublicNext

03/08/2026 02:22 pm

Cinque Terre

3.25 K

Cinque Terre

0

ಸಂಬಂಧಿತ ಸುದ್ದಿ