ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದು ಸಂಜೆ ಡಿಕೆಶಿ ಸರ್ಕಾರಕ್ಕೆ ನೂತನ ಸಚಿವರ ಪದಗ್ರಹಣ : ಲೋಕ ಭವನದ ಸುತ್ತ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ಬೆಂಗಳೂರು: ಅಂತೂ ಇಂತೂ ಇಂದು ಸಂಜೆ ಡಿಕೆ ಶಿವಕುಮಾರ್ ಸರ್ಕಾರಕ್ಕೆ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ಲೋಕಭವನದಲ್ಲಿ ನಡೆಯಲಿದೆ. ಈ ಹಿನ್ನೆಲೆ ಲೋಕಭವನದ ಸುತ್ತ ಮುತ್ತ ಈ ರಸ್ತೆಗಳಲ್ಲಿ ಸಂಚಾರಕ್ಕೆ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ನಿರ್ಬಂಧ ಹೇರಲಾಗಿದೆ.

ಸಂಚಾರ ನಿರ್ಬಂಧ ಎಲ್ಲೆಲ್ಲಿ ಅಂತ ನೋಡೋದಾದ್ರೆ.

.

ಕಬ್ಬನ್ ರಸ್ತೆಯ ಬಿ.ಆರ್.ವಿ ಜಂಕ್ಷನ್‌ನಿಂದ ಸಿ.ಟಿ.ಒ. ಜಂಕ್ಷನ್ ವರೆಗೆ ಹಾಗೂ ಸಿ.ಟಿ.ಒ. ವೃತ್ತದಿಂದ ಲೋಕಭವನದವರೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿರುವ ವಾಹನಗಳನ್ನು ಹೊರತುಪಡಿಸಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

* ಬಾಲೇಕುಂದ್ರಿ ಜಂಕ್ಷನ್‌ನಿಂದ ಅಂಬೇಡ್ಕರ್ ರಸ್ತೆ ಕಡೆಗೆ ಬರುವ ವಾಹನಗಳಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿರುವ ವಾಹನಗಳನ್ನು ಹೊರತುಪಡಿಸಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

* ಡಾ|| ಅಂಬೇಡ್ಕರ್ ರಸ್ತೆಯಲ್ಲಿ ಕೆ.ಆರ್. ಸರ್ಕಲ್ ಕಡೆಯಿಂದ ಕಾಫಿ ಬೋರ್ಡ್ ಜಂಕ್ಷನ್‌ವರೆಗೆ ಸಂಚರಿಸುವ ವಾಹನಗಳಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿರುವ ವಾಹನಗಳನ್ನು ಹೊರತುಪಡಿಸಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

* ಕ್ವೀನ್ಸ್ ಜಂಕ್ಷನ್ ಕಡೆಯಿಂದ ಸಿ.ಟಿ.ಒ ಕಡೆಗೆ ಸಂಚರಿಸುವ ವಾಹನಗಳಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿರುವ ವಾಹನಗಳನ್ನು ಹೊರತುಪಡಿಸಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

* ಕ್ವೀನ್ಸ್ ಜಂಕ್ಷನ್‌ನಲ್ಲಿ ಸೇಂಟ್ ಮಾರ್ಕ್ಸ್ ರಸ್ತೆಯಿಂದ ಸಿ.ಟಿ.ಒ. ಜಂಕ್ಷನ್ ಕಡೆಗೆ ಬರುವ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ಮಾರ್ಗ

ಕಬ್ಬನ್ ರಸ್ತೆಯ ಬಿ.ಆರ್.ವಿ ಜಂಕ್ಷನ್‌ನಿಂದ ಸಿ.ಟಿ.ಒ. ಜಂಕ್ಷನ್ ಹಾಗೂ ಲೋಕಭವನದ ಕಡೆಗೆ ಸಂಚರಿಸುವ ವಾಹನಗಳು ಬಿ.ಆರ್.ವಿ ಜಂಕ್ಷನ್ ಬಳಿ ಶಿವಾಜಿನಗರ ಕಡೆಗೆ ತಿರುಗಿ ಅನಿಲ್ ಕುಂಬ್ಳೆ ಜಂಕ್ಷನ್ ಮುಖಾಂತರ ಸಂಚರಿಸಬಹುದು.

* ಕ್ವೀನ್ಸ್ ರಸ್ತೆ ಹಾಗೂ ಶಿವಾಜಿನಗರ ಕಡೆಯಿಂದ ಬರುವ ವಾಹನಗಳು ಬಾಲೇಕುಂದ್ರಿ ಜಂಕ್ಷನ್ ಬಳಿ ಕನ್ನಿಂಗ್‌ಹ್ಯಾಮ್ ರಸ್ತೆ ಮುಖಾಂತರ ಸಂಚರಿಸಬಹುದು.

* ಕೆ.ಆರ್. ಸರ್ಕಲ್ ಕಡೆಯಿಂದ ಕಾಫಿ ಬೋರ್ಡ್ ಜಂಕ್ಷನ್ ಕಡೆಗೆ ಸಂಚರಿಸುವ ವಾಹನಗಳು ನೃಪತುಂಗ ರಸ್ತೆ ಮುಖಾಂತರ ಸಂಚರಿಸಬಹುದು.

* ಕ್ವೀನ್ಸ್ ಜಂಕ್ಷನ್ ಕಡೆಯಿಂದ ಲೋಕಭವನದ ಕಡೆಗೆ ಸಂಚರಿಸುವ ವಾಹನಗಳು ಅನಿಲ್ ಕುಂಬ್ಳೆ ಹಾಗೂ ಬಿ.ಆರ್.ವಿ ಜಂಕ್ಷನ್ ಮುಖಾಂತರ ಸಂಚರಿಸಬಹುದು.

ವಾಹನಗಳ ನಿಲುಗಡೆ ನಿಷೇಧ

ಡಾ. ಬಿ.ಆರ್. ಅಂಬೇಡ್ಕರ್ ರಸ್ತೆ.

ಲೋಕಭವನ ರಸ್ತೆ

ಎಲ್.ಎಚ್. ರಸ್ತೆ

ಕ್ವೀನ್ಸ್ ರಸ್ತೆ.

ಪ್ಯಾಲೇಸ್ ರಸ್ತೆ

ಕಬ್ಬನ್ ಉದ್ಯಾನವನದ ಒಳಭಾಗದ ರಸ್ತೆಗಳು

ಮಿಲ್ಲರ್ ರಸ್ತೆ

ಇನ್‌ಫ್ಯಾಂಟ್ರಿ ರಸ್ತೆ

ಕೆ.ಜಿ. ರಸ್ತೆ

ನೃಪತುಂಗ ರಸ್ತೆ

ಕಸ್ತೂರಿಬಾ ರಸ್ತೆ

ಕಬ್ಬನ್ ರಸ್ತೆ ಸೇರಿದಂತೆ ಸೂಚಿಸಲಾದ ಇತರೆ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ವಾಹನಗಳ ನಿಲುಗಡೆ

ಪಾಸ್ ಹೊಂದಿರುವ ವಾಹನಗಳು:

ವಿಧಾನಸೌಧ ಸಿಮೆಂಟ್ ಪಾರ್ಕಿಂಗ್ ಸ್ಥಳ

ವಿಕಾಸಸೌಧ ಸುತ್ತಮುತ್ತ

ರಾಜಭವನ ಹಿಂಭಾಗದ ಎಲ್.ಎಚ್. ಪಾರ್ಕಿಂಗ್

ನೆಹರು ತಾರಾಲಯ ಆವರಣ

ಪಾಸ್ ಹೊಂದಿಲ್ಲದ ವಾಹನಗಳು

* ಕೊಂಡಜ್ಜಿ ಭವನ ಆವರಣ

* ಶಿವಾಜಿನಗರ ಬಸ್ ನಿಲ್ದಾಣದ ಮಲ್ಟಿ ಲೆವೆಲ್ ಪಾರ್ಕಿಂಗ್

* ಕಂಠೀರವ ಕ್ರೀಡಾಂಗಣ

* ಯು.ಬಿ. ಸಿಟಿ ಪಾರ್ಕಿಂಗ್

* ಸರ್ಕಾರಿ ಕಲಾ ಕಾಲೇಜು ಆವರಣ

* ಕಾರ್ಪೊರೇಷನ್ ಕಚೇರಿ ಸ್ಥಳ

* ಪ್ಯಾಲೇಸ್ ಮೈದಾನದ ಗೇಟ್ ಸಂಖ್ಯೆ 2, 3 ಮತ್ತು 4

ನಗರದ ಒಳಗೆ ಭಾರಿ ವಾಹನಗಳ ಸಂಚಾರ ನಿಷೇಧ

ಮಧ್ಯಾಹ್ನ 02:00 ಗಂಟೆಯಿಂದ ರಾತ್ರಿ 10:00 ಗಂಟೆಯವರೆಗೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧ.

Edited By : Nirmala Aralikatti
PublicNext

PublicNext

03/08/2026 02:48 pm

Cinque Terre

29.11 K

Cinque Terre

0

ಸಂಬಂಧಿತ ಸುದ್ದಿ