ಹಾವೇರಿ: ಶಾಸಕ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ಘೋಷಣೆಯಾಗುತ್ತಿದ್ದಂತೆ ಹಾವೇರಿಯಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ನಗರದ ವಾಲ್ಮೀಕಿ ವೃತ್ತದಲ್ಲಿ ಜಮಾಯಿಸಿದ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂತಸ ವ್ಯಕ್ತಪಡಿಸಿದರು. ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಪರವಾಗಿ ಘೋಷಣೆಗಳನ್ನು ಕೂಗಿದರು.
ಸಚಿವ ಸ್ಥಾನ ಲಭಿಸಿರುವ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡುವಂತೆ ರುದ್ರಪ್ಪ ಲಮಾಣಿ ಅವರಿಗೆ ಅಭಿಮಾನಿಗಳು ಹಾಗೂ ಸಾರ್ವಜನಿಕರು ಒತ್ತಾಯಿಸಿದರು.
PublicNext
03/08/2026 04:52 pm
LOADING...