ಶಿವಮೊಗ್ಗ : ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತುಂಗಾ ನದಿ ಮೈದುಂಬಿ ಹರಿಯುತ್ತಿದ್ದು, ಶಿವಮೊಗ್ಗ ನಗರದ ನದಿ ದಂಡೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹಾಗೂ ಅವರ ಕುಟುಂಬಸ್ಥರು ತುಂಗಾ ನದಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಶ್ರದ್ಧಾಭಕ್ತಿಯಿಂದ ಬಾಗಿನ ಅರ್ಪಿಸಿದರು.
ಈ ಸಂದರ್ಭದಲ್ಲಿ ಈಶ್ವರಪ್ಪ ಅವರ ಪತ್ನಿ ಜಯಶ್ರೀ ಈಶ್ವರಪ್ಪ, ಪುತ್ರ ಕೆ.ಇ. ಕಾಂತೇಶ್ ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಗಂಗಾ ಮಾತೆಗೆ ವಿಶೇಷ ಪೂಜೆ ನೆರವೇರಿಸಿದರು.
ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಕೆ.ಎಸ್. ಈಶ್ವರಪ್ಪ, "ರಾಜ್ಯದಾದ್ಯಂತ ಉತ್ತಮ ಮಳೆಯಾಗಿ ಜಲಾಶಯಗಳು ಹಾಗೂ ನದಿಗಳು ಭರ್ತಿಯಾಗಿರುವುದು ಸಂತಸ ತಂದಿದೆ. ನದಿಗಳು ತುಂಬಿ ಹರಿಯುತ್ತಿರುವುದು ಕೃಷಿ ಕ್ಷೇತ್ರಕ್ಕೆ ಹಾಗೂ ಜನರಿಗೆ ಸಮೃದ್ಧಿಯ ಸಂಕೇತ. ವರುಣದೇವನ ಕೃಪೆಯಿಂದ ನಾಡಿನಲ್ಲಿ ಕ್ಷಾಮ ರಹಿತ ವಾತಾವರಣ ನಿರ್ಮಾಣವಾಗಲಿ ಎಂದು ಪ್ರಾರ್ಥಿಸಿದರು.
PublicNext
03/08/2026 06:36 pm
LOADING...