ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ನ್ಯಾಯಾಲಯದ ಆದೇಶಕ್ಕೆ ತಲೆಬಾಗಿ ಉಪಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ - ಪ್ರಾಣೇಶ್

ಚಿಕ್ಕಮಗಳೂರು: ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂಬ ಸುಪ್ರೀಂ ಕೋರ್ಟ್‌ನ ತೀರ್ಪಿನ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರು ತಮ್ಮ ಉಪಸಭಾಪತಿ ಸ್ಥಾನ ಹಾಗೂ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ. ಸುಮಾರು ಒಂದೂವರೆ ವರ್ಷಗಳ ಹಿಂದೆ ನಡೆದಿದ್ದ ಮರುಎಣಿಕೆ ಪ್ರಕ್ರಿಯೆಯ ವಿವರಗಳನ್ನು ಒಳಗೊಂಡ ಮುಚ್ಚಿದ ಲಕೋಟೆಯನ್ನು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಹೈಕೋರ್ಟ್‌ನಲ್ಲಿ ತೆರೆದು ಪರಿಶೀಲಿಸಿದಾಗ ಕಾಂಗ್ರೆಸ್ ಅಭ್ಯರ್ಥಿ ಗಾಯಿತ್ರಿ ಶಾಂತೇಗೌಡ ಅವರಿಗೆ ಗೆಲುವಾಗಿದೆ.

ಈ ನ್ಯಾಯಾಲಯದ ಆದೇಶವನ್ನು ಗೌರವಿಸಿ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ ಪ್ರಾಣೇಶ್ ಈವರೆಗೆ ತಾವು ಮಾಡಿಕೊಂಡು ಬಂದಿರುವ ಸತ್ಕಾರ್ಯಗಳನ್ನು ಗಾಯಿತ್ರಿ ಶಾಂತೇಗೌಡ ಅವರು ಮುಂದುವರಿಸಿಕೊಂಡು ಹೋಗಲಿ ಎಂದು ಆಶಿಸಿದರು. ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಗಾಯಿತ್ರಿ ಶಾಂತೇಗೌಡ ಅವರಿಗೆ ಜನಸೇವೆ ಮಾಡಲು ಉತ್ತಮ ಅವಕಾಶ ಸಿಕ್ಕಿದ್ದು, ಅವರಿಗೆ ಮುಂದಿನ ದಿನಗಳಲ್ಲಿ ಶುಭವಾಗಲಿ ಎಂದು ಪ್ರಾಣೇಶ್ ಹಾರೈಸಿದ್ದಾರೆ.

Edited By :
PublicNext

PublicNext

03/08/2026 07:12 pm

Cinque Terre

18.4 K

Cinque Terre

0

ಸಂಬಂಧಿತ ಸುದ್ದಿ