ಚಿಕ್ಕಮಗಳೂರು: ವಿಧಾನಪರಿಷತ್ ಮಾಜಿ ಉಪಸಭಾಪತಿ ಎಂ. ಕೆ. ಪ್ರಾಣೇಶ್ ಅವರು ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮಗೆ ಈಗಾಗಲೇ ಪಕ್ಷದಿಂದ ಎರಡು ಬಾರಿ ಸ್ಪರ್ಧಿಸಲು ಅವಕಾಶ ಸಿಕ್ಕಿದ್ದು, ಉಪಸಭಾಪತಿ ಸ್ಥಾನದಂತಹ ಗೌರವಯುತ ಜವಾಬ್ದಾರಿಯನ್ನು ನೀಡಲಾಗಿದೆ. ಹೀಗಾಗಿ ಇತರ ಆಕಾಂಕ್ಷಿಗಳಿಗೂ ಅವಕಾಶ ಸಿಗಬೇಕು ಎಂಬ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.
ಈ ನಿರ್ಧಾರವು ಇತ್ತೀಚಿನ ಘಟನೆಗಳಿಂದ ಬಂದಿದ್ದಲ್ಲ, ಬದಲಿಗೆ ಆರು ತಿಂಗಳ ಹಿಂದೆಯೇ ಪಕ್ಷದ ಅಧ್ಯಕ್ಷರು ಹಾಗೂ ನಾಯಕರಿಗೆ ಸ್ಪರ್ಧಿಸುವುದಿಲ್ಲ ಎಂಬ ವಿಷಯವನ್ನು ತಿಳಿಸಿ ಬೇರೆಯವರನ್ನು ಗುರುತಿಸುವಂತೆ ಕೋರಿದ್ದಾಗಿ ಹೇಳಿದ್ದಾರೆ. ತಮಗೆ ಪಕ್ಷ ಅಥವಾ ಯಾವುದೇ ನಾಯಕರ ಮೇಲೆ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಮೇಲೂ ಯಾವುದೇ ವೈಯಕ್ತಿಕ ಅಸಮಾಧಾನವಿಲ್ಲ, ಅದು ಕಾನೂನಿನ ಹೋರಾಟವಾಗಿತ್ತು ಎಂದು ತಿಳಿಸಿದ್ದಾರೆ.
PublicNext
03/08/2026 07:50 pm
LOADING...