ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಕಾನ್ ಸ್ಟೇಬಲ್ ನೇಮಕಾತಿ ಪರೀಕ್ಷೆ ಗೊಂದಲ ಖಂಡಿಸಿ ಎಬಿವಿಪಿ ಪ್ರತಿಭಟನೆ, ಬಂಧನ

ವಿಜಯಪುರ: ವಿಜಯಪುರ ಜಿಲ್ಲೆಯ ತಿಕೋಟದಲ್ಲಿ ಪೊಲೀಸ್ ಕಾನ್ ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಗೊಂದಲವನ್ನು ಖಂಡಿಸಿ ಹಾಗೂ ಅನ್ಯಾಯಕ್ಕೆ ಒಳಗಾದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ನಗರದ ಗಾಂಧಿ ವೃತ್ತದಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ವೇಳೆ ಎಬಿವಿಪಿ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ಉಂಟಾಗಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.

ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ, ಘಟನೆಯ ನೈಜ ಕಾರಣವನ್ನು ಬಹಿರಂಗ ಪಡಿಸಬೇಕು. ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧ ಹಾಗೂ ಶಿಸ್ತು ಕ್ರಮ ಕೈಗೊಂಡು, ಯಾವುದೇ ಅಭ್ಯರ್ಥಿಗೆ ಅನ್ಯಾಯವಾಗದಂತೆ ನ್ಯಾಯಸಮ್ಮತ ನಿರ್ಧಾರ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

Edited By :
PublicNext

PublicNext

04/08/2026 07:25 am

Cinque Terre

10.66 K

Cinque Terre

0

ಸಂಬಂಧಿತ ಸುದ್ದಿ