ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಟಿಂಬರ್ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಾರೆಮನೆ ಬಳಿ ನಡೆದಿದೆ.
ಓವರ್ ಟೆಕ್ ಮಾಡುತ್ತಿದ್ದಾಗ ಕಾರಿನ ಟೈರ್ ಬ್ಲಾಸ್ಟ್ ಆಗಿದ್ದು ಈ ಸಂದರ್ಭದಲ್ಲಿ ಕಾರು ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ರಸ್ತೆ ಪಕ್ಕದ ತೋಟಕ್ಕೆ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು ಅದೃಷ್ಟವಶಾತ್ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾನೆ. ಕಾರಿನಲ್ಲಿದ್ದ ಯುವಕರು ಹೈದರಾಬಾದ್ ಮೂಲದ ಪ್ರವಾಸಿಗರೆಂದು ತಿಳಿದುಬಂದಿದೆ.
PublicNext
04/08/2026 08:10 am
LOADING...