ಶಿವಮೊಗ್ಗ: ನಗರದ ರಸ್ತೆ ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ದೀರ್ಘಕಾಲದಿಂದ ನಿರುಪಯುಕ್ತವಾಗಿ ನಿಲ್ಲಿಸಲಾಗಿದ್ದ ವಾಹನಗಳ ವಿರುದ್ಧ ಶಿವಮೊಗ್ಗ ಸಂಚಾರಿ ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ.
ನಗರದಲ್ಲಿ ಸಂಚಾರ ಅಡೆತಡೆ ತಪ್ಪಿಸಲು ನಡೆಸಿದ ಈ ವಿಶೇಷ ಕಾರ್ಯಾಚರಣೆಯಲ್ಲಿ ಒಟ್ಟು 82 ನಿರುಪಯುಕ್ತ ವಾಹನಗಳನ್ನು ಗುರುತಿಸಲಾಗಿತ್ತು. ಮೊದಲ ಹಂತದಲ್ಲಿ 59 ವಾಹನಗಳಿಗೆ ನೋಟಿಸ್ ಅಂಟಿಸಿ, ತೆರವುಗೊಳಿಸಲು ಮಾಲೀಕರಿಗೆ ಸೂಕ್ತ ಕಾಲಾವಕಾಶ ನೀಡಲಾಗಿತ್ತು.
ಆದರೆ, ನೋಟಿಸ್ ನೀಡಿದರೂ ಜಾಗ ಖಾಲಿ ಮಾಡದ ಹಿನ್ನೆಲೆಯಲ್ಲಿ ಪೊಲೀಸರು ಖಡಕ್ ಕ್ರಮ ಕೈಗೊಂಡಿದ್ದು, ಇದುವರೆಗೆ 68 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕಾರ್ಯಾಚರಣೆಯು ನಗರದ ರವೀಂದ್ರನಗರ, ಗುಂಡಪ್ಪಶೆಟ್ಟಿಹಳ್ಳಿ ಹಾಗೂ ಲಕ್ಷ್ಮೀ ಚಿತ್ರಮಂದಿರ ರಸ್ತೆ ಸೇರಿದಂತೆ ವಿವಿಧ ಪ್ರಮುಖ ಪ್ರದೇಶಗಳಲ್ಲಿ ನಡೆದಿದೆ.
PublicNext
04/08/2026 08:15 am
LOADING...