Exclusive
ಗದಗ : ರೌಡಿ ಶೀಟರ್ ಒಬ್ಬ ಯುವಕನನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಅದನ್ನು ವಿಡಿಯೋ ಮಾಡಿ ಖುಷಿಪಟ್ಟಿರುವ ಘಟನೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಲಕ್ಷ್ಮೇಶ್ವರ ಪಟ್ಟಣದ ರೌಡಿ ಶೀಟರ್ ಆಗಿರುವ ಅಬ್ದುಲ್ ಅಡೂರ್ ಅಲಿಯಾಸ್ 'ರೆಬೆಲ್' ಎಂದು ಹೆಸರು ಇಟ್ಟುಕೊಂಡು ಓಡಾಡುತ್ತಿರುವ ರೌಡಿ ಶೀಟರ್‌ನೇ ಯುವಕನ ಮೇಲೆ ಹಲ್ಲೆ ನಡೆಸಿ, ಅದನ್ನು ವಿಡಿಯೋ ಮಾಡಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟು ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದ್ದಾನೆ.
ಸದ್ಯ ಈತನ ಮೇಲೆ ಹಲವು ಪ್ರಕರಣಗಳಿದ್ದು, ಈತ ಇದೇ ರೀತಿ ಅಮಾಯಕರನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಚಿತ್ರಹಿಂಸೆ ನೀಡುತ್ತಾನೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಸದ್ಯ ಈ ಕುರಿತು ಗದಗ ಜಿಲ್ಲಾ SP ಈತನ ಮೇಲೆ ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
- ವಿನಯ್ ರೆಡ್ಡಿ, ಪಬ್ಲಿಕ್ ನೆಕ್ಸ್ಟ್, ಗದಗ
PublicNext
04/08/2026 10:01 am
LOADING...