ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮರಕ್ಕೆ ಕಾರು ಡಿಕ್ಕಿಯಾಗಿ ಯುವಕ ಸಾವು, ಮೂರು ತುಂಡಾದ ಕಾರು

ಶಿವಮೊಗ್ಗ: ನಗರದ ಹರಿಗೆ ಬಳಿ ಮಧ್ಯರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಸೀದಾ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಗುರುರಾಜ್ (21) ಎಂಬ ಯುವಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ರಾತ್ರಿ ಸುಮಾರು 3 ಗಂಟೆಯ ವೇಳೆಗೆ ಈ ಅಪಘಾತ ಸಂಭವಿಸಿದೆ. ಅತಿಯಾದ ವೇಗವೇ ಈ ದುರಂತಕ್ಕೆ ಮುಖ್ಯ ಕಾರಣ ಎಂದು ಶಂಕಿಸಲಾಗಿದೆ. ಡಿಕ್ಕಿಯ ರಭಸ ಎಷ್ಟಿತ್ತೆಂದರೆ, ಕಾರು ಮೂರು ಭಾಗವಾಗಿ ಸಂಪೂರ್ಣವಾಗಿ ಛಿದ್ರ ಛಿದ್ರಗೊಂಡು ನಜ್ಜುಗುಜ್ಜಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಶಿವಮೊಗ್ಗ ಪೂರ್ವ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Edited By : Nirmala Aralikatti
PublicNext

PublicNext

04/08/2026 10:28 am

Cinque Terre

5.86 K

Cinque Terre

0

ಸಂಬಂಧಿತ ಸುದ್ದಿ