ಶೃಂಗೇರಿ: ಪಶ್ಚಿಮ ಘಟ್ಟ ಹಾಗೂ ಕೆರೆಕಟ್ಟೆ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ತುಂಗಾ ನದಿಯು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ನದಿ ತಟದ ಜನರಲ್ಲಿ ಮತ್ತೆ ನೆರೆ ಭೀತಿ ಆವರಿಸಿದೆ. ಕಳೆದ ನಾಲ್ಕೈದು ದಿನಗಳಿಂದ ಶಾಂತವಾಗದ ತುಂಗೆಯ ಅಬ್ಬರ ರಾತ್ರಿಯಿಡೀ ಸುರಿದ ಮಳೆಗೆ ಮತ್ತಷ್ಟು ಹೆಚ್ಚಾಗಿದ್ದು, ನೀರಿನ ಮಟ್ಟ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿದೆ. ಪರಿಣಾಮವಾಗಿ, ಶೃಂಗೇರಿ ಮಠದ ಪ್ಯಾರಲಲ್ ರಸ್ತೆ ಹಾಗೂ ಶ್ರೀ ಶಾರದಾಂಬೆ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಗೆ ನೀರು ನುಗ್ಗುವ ಭೀತಿ ಎದುರಾಗಿದೆ. ಮಳೆಯ ರೌದ್ರನರ್ತನಕ್ಕೆ ನದಿ ಪಾತ್ರದ ತಗ್ಗು ಪ್ರದೇಶಗಳು ಜಲಾವೃತಗೊಳ್ಳುತ್ತಿದ್ದು, ಸ್ಥಳೀಯ ಆಡಳಿತ ಮತ್ತು ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕಿದೆ.
PublicNext
04/08/2026 10:59 am
LOADING...