ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಕಳೆದ ಮೂರು ದಿನಗಳಿಂದ ಬಿಟ್ಟುಬಿಡದೇ ಸುರಿಯುತ್ತಿರುವ ಭಾರೀ ಮಳೆಗೆ ಜಲಮೂಲಗಳು ಭರ್ತಿಯಾಗಿ ಹರಿಯುತ್ತಿವೆ. ವಿಶೇಷವಾಗಿ ತೀರ್ಥಹಳ್ಳಿ ಹಾಗೂ ಶೃಂಗೇರಿ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ತುಂಗಾ ನದಿ ಅಪಾಯದ ಮಟ್ಟ ಮೀರಿ ಭೋರ್ಗರೆಯುತ್ತಿದೆ.
ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿರುವ ತುಂಗಾ ಜಲಾಶಯಕ್ಕೆ ಪ್ರಸ್ತುತ 59,607 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಲಾಶಯದ 22 ಕ್ರೆಸ್ಟ್ ಗೇಟ್‌ಗಳನ್ನು ತೆರೆದು, ಭೀಕರವಾಗಿ ಹರಿಯುತ್ತಿರುವ 50,753 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ.
ನದಿಯ ನೀರಿನ ಮಟ್ಟ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ತುಂಗಾ ನದಿ ಪಾತ್ರದ ತಗ್ಗು ಪ್ರದೇಶಗಳ ನಿವಾಸಿಗಳು ಹಾಗೂ ಸುತ್ತಮುತ್ತಲಿನ ಸಾರ್ವಜನಿಕರು ತೀವ್ರ ಎಚ್ಚರಿಕೆಯಿಂದ ಇರುವಂತೆ ಶಿವಮೊಗ್ಗ ಜಿಲ್ಲಾಡಳಿತ ಸೂಚಿಸಿದೆ.
PublicNext
04/08/2026 01:27 pm
LOADING...