ಶಿವಮೊಗ್ಗ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿಗಳ ಅಕ್ರಮ ಪ್ರಕರಣದ ತನಿಖೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ ಸದಸ್ಯ ಗಿರೀಶ್ ಭದ್ರಾಪುರ ಆಗ್ರಹಿಸಿದ್ದಾರೆ.
ಶಿವಮೊಗ್ಗದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "2024–25ನೇ ಸಾಲಿನಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ 187 ಕೋಟಿ ರೂ.ಗಳ ಹಗರಣಕ್ಕೆ ಸಂಬಂಧಿಸಿದಂತೆ ಭಾರತದ ಸಂವಿಧಾನದ ವಿಧಿ (ಆರ್ಟಿಕಲ್) 338A ಅಡಿಯಲ್ಲಿ ನವದೆಹಲಿಯ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ" ಎಂದು ತಿಳಿಸಿದರು. ಈ ಸಂಬಂಧ ಜುಲೈ 23, 2026ರಂದು ಎಲ್ಲಾ ದಾಖಲೆಗಳೊಂದಿಗೆ ಹಾಜರಾಗುವಂತೆ ಅಧಿಕಾರಿಗಳಿಗೆ ಆಯೋಗ ಸೂಚಿಸಿದ್ದು, ಸೆಪ್ಟೆಂಬರ್ 20, 2026ರಂದು ನವದೆಹಲಿಯಲ್ಲಿ ವಿಚಾರಣೆ ನಡೆಯಲಿದೆ. ಪ್ರಸ್ತುತ ಆರೋಪಗಳು ಸಾಬೀತಾಗುವ ಹಂತದಲ್ಲಿವೆ ಎಂದು ಅವರು ಹೇಳಿದರು.
"ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ವಿಧಾನಸಭೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿರುವುದನ್ನು ಒಪ್ಪಿಕೊಂಡಿದ್ದಾರೆ. ಸುಮಾರು 187 ಕೋಟಿ ರೂ. ಹಣವನ್ನು ನಕಲಿ ಚೆಕ್‌ಗಳು ಹಾಗೂ ಆರ್‌ಟಿಜಿಎಸ್ (RTGS) ಮೂಲಕ ದುರುಪಯೋಗಪಡಿಸಿಕೊಂಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ" ಎಂದು ಆರೋಪಿಸಿದರು.
"ಈ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ಅವರು ತಕ್ಷಣವೇ ತಮ್ಮ ಸಚಿವ ಸ್ಥಾನ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅಲ್ಲದೆ ಭವಿಷ್ಯದಲ್ಲಿ ಅವರಿಗೆ ಯಾವುದೇ ಸಾಂವಿಧಾನಿಕ ಹುದ್ದೆ ನೀಡಬಾರದು" ಎಂದು ಗಿರೀಶ್ ಭದ್ರಾಪುರ ಒತ್ತಾಯಿಸಿದರು.
PublicNext
04/08/2026 03:02 pm
LOADING...