ಶಿಗ್ಗಾವಿ (ಆಗಸ್ಟ್ 4): ಶಿಗ್ಗಾವಿ ಪಟ್ಟಣದಿಂದ ಕುರ್ಸಾಪುರ ಮತ್ತು ಕಲ್ಯಾಣ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಹೊರವಲಯದ ಸರ್ವಿಸ್ ರಸ್ತೆ ಕಳೆದ ಎರಡು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದ್ದು, ಭಾರಿ ತಗ್ಗು-ಗುಂಡಿಗಳಿಂದಾಗಿ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕಳೆದ ಎರಡು ವರ್ಷಗಳಿಂದ ಈ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿದ್ದು, ಮಳೆ ಬಂದಾಗ ಸಂಚಾರ ಮತ್ತಷ್ಟು ನರಕಯಾತನೆಯಾಗುತ್ತಿದೆ. ಇತ್ತೀಚೆಗೆ ಶಾಸಕ ಯಾಸೀರ್ ಖಾನ್ ಪಠಾಣ್ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ದುರಸ್ತಿಗೆ ತಾಕೀತು ಮಾಡಿದ್ದರೂ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಕನಿಷ್ಟ ಮಾನವೀಯತೆಯ ದೃಷ್ಟಿಯಿಂದ ತಾಲೂಕು ಆಡಳಿತ ತಗ್ಗುಗಳಿಗೆ ಮಣ್ಣು ಹಾಕಿ ತಾತ್ಕಾಲಿಕ ದುರಸ್ತಿ ಮಾಡದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಇದರಿಂದ ಕೆರಳಿರುವ ಸ್ಥಳೀಯರು ಹಾಗೂ ವಾಹನ ಸವಾರರು ಹೆದ್ದಾರಿ ಪ್ರಾಧಿಕಾರ ಮತ್ತು ತಾಲೂಕು ಆಡಳಿತದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದು, ಕೂಡಲೇ ರಸ್ತೆ ದುರಸ್ತಿ ಮಾಡದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.
PublicNext
04/08/2026 04:23 pm
LOADING...