ಮುಂಡರಗಿ: ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ಶಾಸಕ ಚಂದ್ರು ಲಮಾಣಿ ಅವರ ನೇತೃತ್ವದಲ್ಲಿ ವಿಬಿಜಿ ರಾಮ್ ಜಿ (VB-G RAM G) ಯೋಜನೆ ಕುರಿತು ಪ್ರಗತಿ ಪರಿಶೀಲನಾ ಸಭೆ ಜರುಗಿತು. ಈ ವೇಳೆ ಮುಂಡರಗಿ ಹೋಬಳಿ ವ್ಯಾಪ್ತಿಯ ಎಂಟು ಗ್ರಾಮ ಪಂಚಾಯಿತಿಗಳಲ್ಲಿ ಕೈಗೊಂಡ ಸಮುದಾಯ ಕಾಮಗಾರಿ ಹಾಗೂ ವೈಯಕ್ತಿಕ ಕಾಮಗಾರಿಗಳ ಕುರಿತು ಶಾಸಕರು ಮಾಹಿತಿ ಪಡೆದರು.
ಪ್ರತಿ ಪಂಚಾಯತಿವಾರು ವಿಬಿಜಿ ರಾಮ್ ಜಿ ಯೋಜನೆಯಡಿ ಬಿಡುಗಡೆಯಾದ ಅನುದಾನದ ಕುರಿತು ವಿವರಣೆ ಪಡೆದ ಶಾಸಕ ಚಂದ್ರು ಲಮಾಣಿ ಅವರು, ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ವಿಜಯಕುಮಾರ ಬೆಣ್ಣೆ, ಸಹಾಯಕ ನಿರ್ದೇಶಕ ವಿಶ್ವನಾಥ ಹೊಸಮನಿ, ವಲಯ ಅರಣ್ಯಾಧಿಕಾರಿಗಳು ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
PublicNext
04/08/2026 04:25 pm
LOADING...