ಹುಬ್ಬಳ್ಳಿ: ಅವಳಿ ನಗರದ ನಿವಾಸಿಗಳ ಕುಂದು-ಕೊರತೆಗಳಿಗೆ ತಕ್ಷಣವೇ ಸ್ಪಂದಿಸುವ ಉದ್ದೇಶದಿಂದ ಮಹಾನಗರ ಪಾಲಿಕೆಯ ವತಿಯಿಂದ 'ಮೇಯರ್ ಜೊತೆ ಮಾತುಕತೆ' ಎಂಬ ವಿನೂತನ ಜನಪರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಾಳೆ, ಆಗಸ್ಟ್ 5ರ ಬುಧವಾರ ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 12:00 ಗಂಟೆಯವರೆಗೆ ಈ ಕಾರ್ಯಕ್ರಮ ನಡೆಯಲಿದೆ.
ಸಾರ್ವಜನಿಕರು ತಮ್ಮ ತಮ್ಮ ವಾರ್ಡ್‌ಗಳ ಕುಡಿಯುವ ನೀರು, ಕಸ ವಿಲೇವಾರಿ, ರಸ್ತೆ, ಬೀದಿದೀಪ, ಒಳಚರಂಡಿ ವ್ಯವಸ್ಥೆ ಹಾಗೂ ಇತರೆ ವೈಯಕ್ತಿಕ/ಸಾರ್ವಜನಿಕ ಸಮಸ್ಯೆಗಳ ಕುರಿತು ನೇರವಾಗಿ ಮೇಯರ್ ದುರ್ಗಮ್ಮ ಬಿಜವಾಡ ಅವರೊಂದಿಗೆ ಫೋನ್ ಮೂಲಕ ಮಾತನಾಡಿ ದೂರು ದಾಖಲಿಸಬಹುದು.
ಇನ್ಮುಂದೆ ಪ್ರತಿ ತಿಂಗಳ ಮೊದಲ ಬುಧವಾರದಂದು ಈ 'ಫೋನ್ ಇನ್' ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಸಾರ್ವಜನಿಕರು 8277802331 ಅಥವಾ 8277802334 ಸಂಖ್ಯೆಗೆ ಕರೆ ಮಾಡಿ ತಮ್ಮ ಸಮಸ್ಯೆಗಳನ್ನು ತಿಳಿಸಬಹುದು. ಅಲ್ಲದೆ, ಅವಳಿ ನಗರದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಅಗತ್ಯ ಅನಿಸಿಕೆ, ಅಭಿಪ್ರಾಯ ಹಾಗೂ ಸಲಹೆಗಳನ್ನು ಹಂಚಿಕೊಳ್ಳಬಹುದು ಎಂದು ಪಾಲಿಕೆ ತಿಳಿಸಿದೆ.
Kshetra Samachara
04/08/2026 05:02 pm
LOADING...